ಯುವಜನತೆ ಕೌಶಲ್ಯಾಧಾರಿತ ತರಬೇತಿ ಪಡೆಯಿರಿ

  |   Chamarajanagarnews

ಚಾಮರಾಜನಗರ: ಯುವಕರು ಸರ್ಕಾರಿ ಹುದ್ದೆಗಳನ್ನು ಮಾತ್ರ ಪಡೆಯಲು ಮುಂದಾಗದೇ ಕೌಶಲ್ಯಾಧಾರಿತ ತರಬೇತಿ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸಲಹೆ ಮಾಡಿದರು.

ನಗರದ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದ ಅವರಣದಲ್ಲಿ ಕೌಶಲ್ಯ ವಿಕಾಸ ಯೋಜನೆಯಡಿ ಶನಿವಾರ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿವಿಧೆಡೆ ಕೇಂದ್ರಗಳ ಸ್ಥಾಪನೆ: ಶಿಕ್ಷಣ ಮುಗಿಸಿದ ಎಲ್ಲರಿಗೂ ಸರ್ಕಾರ ಕೆಲಸ ನೀಡಲು ಸಾದ್ಯವಾಗುವುದಿಲ್ಲ. ಯುವಸಮೂಹ ಇದನ್ನು ಅರಿತು ವಿವಿಧ ಕೌಶಲ್ಯ ತರಬೇತಿ ಪಡೆದು ತಮ್ಮ ಜೀವನಮಟ್ಟ ಸುಧಾರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಡ್ಡಾಯ ಶಿಕ್ಷಣ ನೀತಿಯನ್ನು ಜಾರಿಗೆ ತಂದು ಪ್ರಧಾನಮಮತ್ರಿ ಕೌಶಲ್ಯ ಕೇಂದ್ರಗಳನ್ನು ದೇಶದ ವಿವಿಧಡೆ ಸ್ಥಾಪಿಸಿದೆ ಎಂದರು.

ಮೂಲಭೂತ ಸೌಲಭ್ಯಗಳಿಗೆ ಗಮನ ಹರಿಸಬೇಕು: ಈ ಭಾಗದಲ್ಲಿ ಕೈಗಾರಿಕಾ ಪ್ರದೇಶಗಳು ಕಡಿಮೆ ಇವೆ. ಕೈಗಾರಿಕೆಗಳನ್ನು ಹೆಚ್ಚಿನ ಮಟ್ಟದಲ್ಲಿ ನಮ್ಮ ಜಿಲ್ಲೆಯಲ್ಲೂ ತೆರೆಯಲು ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ನಗರದ ಹೊರವಲಯದಲ್ಲಿರುವ ಬದನಗುಪ್ಪೆ, ಕೆಲ್ಲಂಬಳ್ಳಿಯಲ್ಲಿ ಕೈಗಾರಿಕಾ ವಲಯದ ಪ್ರಗತಿಯಾಗುತ್ತಿದೆ. ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಮೊದಲು ಅಲ್ಲಿನ ಕುಡಿಯುವ ನೀರು, ರಸ್ತೆ, ವಿದ್ಯುತ್‌ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ಗಮನ ಹರಿಸಬೇಕಾಗಿದೆ ಎಂದು ಸಚಿವರು ತಿಳಿಸಿದರು....

ಫೋಟೋ - http://v.duta.us/8K-b4gAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/_70oKQAA

📲 Get Chamarajanagar News on Whatsapp 💬