ರೈತರ ಮನೆ ಬಾಗಿಲಿಗೆ ಕಿಸಾನ್‌ ಸಮ್ಮಾನ್‌ ಯೋಜನೆ

  |   Ramnagaranews

ರಾಮನಗರ: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ವಾರ್ಷಿಕ 6 ಸಾವಿರ ರೂ. ಪಡೆಯಲು ಭೂ ಒಡೆತನ ಹೊಂದಿರುವ ರೈತರು ಕೂಡಲೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜೂನ್‌ 25 ಕೊನೆ ದಿನ. ತಾಲೂಕು ಆಡಳಿತದ ನಗದಿತ ಅರ್ಜಿಗಳನ್ನು ರೈತರ ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ ಎಂದು ತಹಶೀಲ್ದಾರ್‌ ರಾಜು ತಿಳಿಸಿದ್ದಾರೆ.

ಮಿನಿ ವಿಧಾನಸೌಧದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಸಹಾಯಕರು, ಗ್ರಾಮ ಪಂಚಾಯ್ತಿ ಸಿಬ್ಬಂದಿ ರೈತರ ಮನೆ ಬಾಗಿಲಿಗೆ ತೆರಳಿ ಅರ್ಜಿಗಳನ್ನು ವಿತರಿಸಲಿದ್ದಾರೆ. ಈ ಯೋಜನೆಯಡಿ ಪ್ರತಿ ರೈತರಿಗೆ 3 ಕಂತುಗಳಲ್ಲಿ ವಾರ್ಷಿಕ 6 ಸಾವಿರ ರೂ. ರೈತರ ಆಧಾರ್‌ ಜೋಡಣೆ ಆಗಿರುವ ಬ್ಯಾಂಕ್‌ ಖಾತೆಗಳಿಗೆ ಜಮೆ ಆಗಲಿದೆ. ಈ ಸೌಲಭ್ಯವನ್ನು ಪಡೆಯಲು ಎಲ್ಲಾ ರೈತರು ಅರ್ಹರಿದ್ದಾರೆ ಎಂದರು.

ಒದಗಿಸಬೇಕಾದ ದಾಖಲೆಗಳು: ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಸೌಲಭ್ಯ ಪಡೆಯಲು ರೈತರು ತಮ್ಮ ಆಧಾರ್‌ ಸಂಖ್ಯೆ, ಆಧಾರ್‌ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್‌ ಖಾತೆಯ ಪಾಸ್‌ಬುಕ್‌ ಛಾಯಾ ಪ್ರತಿ ನೀಡಬೇಕಾಗಿದೆ. ರೈತರು ಪಹಣಿ ನೀಡಬೇಕಾಗಿಲ್ಲ. ಆದರೆ, ತಾವು ಹೊಂದಿರುವ ಭೂಮಿಯ ವಿವರವನ್ನು ಅರ್ಜಿಯಲ್ಲಿ ನಮೂದಿಸಬೇಕಾಗಿದೆ. ಪಹಣಿ ವಿವರಗಳನ್ನು ತಾಲೂಕು ಕಚೇರಿಯಲ್ಲಿ ಸಿಬ್ಬಂದಿಯೇ ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದರು....

ಫೋಟೋ - http://v.duta.us/uQWaHgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/PxjG8gAA

📲 Get Ramnagara News on Whatsapp 💬