ವೈಟಿಪಿಎಸ್‌ ಗುತ್ತಿಗೆ ಕಾರ್ಮಿಕರಿಂದ ಹೆದ್ದಾರಿ ತಡೆ

  |   Raichurnews

ರಾಯಚೂರು: ವೈಟಿಪಿಎಸ್‌ನಲ್ಲಿ ಗುತ್ತಿಗೆ ಆಧಾರದಡಿ ಕೆಲಸ ಮಾಡುತ್ತಿದ್ದ 410 ಕಾರ್ಮಿಕರನ್ನು ಸೇವೆಗೆ ಮರು ನೇಮಿಸಿಕೊಳ್ಳುವಂತೆ ಆಗ್ರಹಿಸಿ ಟಿಯುಸಿಐ ಸಂಯೋಜಿತ ಯರಮರಸ್‌ ಥರ್ಮಲ್ ಪವರ್‌ ಸ್ಟೇಶನ್‌ ಕಾರ್ಮಿಕ ಸಂಘದಿಂದ ಶನಿವಾರ ಬೈಪಾಸ್‌ ಬಳಿ ಹೆದ್ದಾರಿ ಸಂಚಾರ ತಡೆದು ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿರುವ ಕಾರಣ ಟ್ರಾಫಿಕ್‌ ಸಮಸ್ಯೆಯಾಗಿ ಕಿಮೀಗಟ್ಟಲೇ ವಾಹನಗಳು ಸಾಲುಗಟ್ಟಿದ್ದವು. ಬೆಳಗ್ಗೆ ರಸ್ತೆಗೆ ಅಡ್ಡಲಾಗಿ ಕುಳಿತು ಧರಣಿ ನಡೆಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಸಂಚಾರಕ್ಕೆ ಸಾಕಷ್ಟು ಅಡಚಣೆಯಾಯಿತು.

ಈ ವೇಳೆ ಮಾತನಾಡಿದ ಸಂಘಟನೆ ಮುಖಂಡರು, ವೈಟಿಪಿಎಸ್‌ ಆರಂಭಕ್ಕೂ ಮುನ್ನ 2500 ಜನ ಸ್ಥಳೀಯರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಕೆಪಿಸಿ, ಈಗ ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಿದೆ. ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸಿ ಕಳೆದ 20 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಯಾರು ಸ್ಪಂದಿಸಿಲ್ಲ. ಅಲ್ಲದೇ, ಕಳೆದ 12 ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡಿದರೂ ಸರ್ಕಾರ ನಮ್ಮ ಬೇಡಿಕೆಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಹೀಗಾಗಿ ಅನಿವಾರ್ಯವಾಗಿ ಹೆದ್ದಾರಿ ತಡೆಗೆ ಮುಂದಾಗಿದ್ದಾಗಿ ತಿಳಿಸಿದರು....

ಫೋಟೋ - http://v.duta.us/JFiOzwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Kul7agAA

📲 Get Raichur News on Whatsapp 💬