ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್‌ ಅನಿವಾರ್ಯ: ಖಂಡ್ರೆ

  |   Bidarnews

ಭಾಲ್ಕಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್‌ ಭಾಷೆ ಕಲಿಕೆ ಅನಿವಾರ್ಯವಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಜೋಳದಾಪಕಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ ಬೀದರ್‌ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಆಂಗ್ಲ ಮಾಧ್ಯಮ ವಿಭಾಗ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳಲ್ಲಿನ ದುಬಾರಿ ಶುಲ್ಕದಿಂದ ಪಾಲಕರು ಬೇಸತ್ತಿದ್ದಾರೆ. ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ಬಡ ಮಕ್ಕಳಿಗೆ ಕನಸಾಗಿತ್ತು. ಆದರೆ, ಮೈತ್ರಿ ಸರಕಾರದ ದಿಟ್ಟ ನಿರ್ಧಾರದಿಂದ ಇಂದು ಬಡ ಮಕ್ಕಳು ಸಹ ಯಾವುದೇ ಶುಲ್ಕವಿಲ್ಲದೇ ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ಪಡೆಯ ಬಹುದಾಗಿದೆ ಎಂದರು. ಪ್ರಾಥಮಿಕ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಆರಂಭದಿಂದಲೇ ಇಂಗ್ಲಿಷ್‌ ಕಲಿಕೆಗೆ ಆದ್ಯತೆ ನೀಡುವುದರಿಂದ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಯೊಡ್ಡಲು ಸಹಕಾರಿಯಾಗುತ್ತದೆ ಎಂದರು. ಮಕ್ಕಳ ಕಲಿಕೆಗೆ ಶಿಕ್ಷಕರ ಜತೆಗೆ ಪಾಲಕರ ಹೊಣೆಗಾರಿಕೆಯೂ ಮಹತ್ವದ್ದಾಗಿರುತ್ತದೆ. ಹಾಗಾಗಿ ಶಿಕ್ಷಕರು ಮತ್ತು ಪಾಲಕರು ತಮ್ಮ ಪಾಲಿನ ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು....

ಫೋಟೋ - http://v.duta.us/M4SB1gAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/qL2q-wAA

📲 Get Bidar News on Whatsapp 💬