ಸಾಲಗಾರರ ಕಿರುಕುಳದಿಂದ ನೊಂದು ಕತ್ತು ಕೊಯ್ದುಕೊಂಡ ಮುಖ್ಯ ಶಿಕ್ಷಕಿ

  |   Karnatakanews

ಸಾಗರ: ಮಹಿಳೆಯೊಬ್ಬರು ನ್ಯಾಯಕ್ಕಾಗಿ ನ್ಯಾಯಾಧೀಶರಿಗೆ ಪತ್ರ ಬರೆದು ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ನಗರದ ಎಂಜಿಎನ್‌ ಪೈ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ, ಗಾಂಧಿ ನಗರ ನಿವಾಸಿ ವಾರಿಜಾ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇವರು ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆದಿದ್ದು, ಮರುಪಾವತಿಗಾಗಿ ಸಾಲ ನೀಡಿದ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ವಾರಿಜಾ ಪೊಲೀಸರ ಮೊರೆ ಹೋಗಿದ್ದು, ಪೊಲೀಸರು ರಾಜಿ ಸಂಧಾನ ನಡೆಸಿ, ಸಮಸ್ಯೆ ಬಗೆಹರಿಸಿದ್ದರು. ಆದರೂ ಇತ್ತೀಚೆಗೆ ಕೆಲ ವ್ಯಕ್ತಿಗಳು ಬಡ್ಡಿ ಹಣ ನೀಡುವಂತೆ ವಾರಿಜಾ ಅವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.

ಇದರಿಂದ ನೊಂದ ವಾರಿಜಾ ಅವರು ಡೆತ್‌ನೋಟ್‌ ಬರೆದಿದ್ದು, ನ್ಯಾಯ ಕೊಡಿಸುವಂತೆ ನ್ಯಾಯಾಧಿಧೀಶರಾದ ಸಯ್ಯದ್‌ ಅರಫಾತ್‌ ಇಬ್ರಾಹಿಂ ಅವರಲ್ಲಿ ಮನವಿ ಮಾಡಿದ್ದಾರೆ. ಡೆತ್‌ನೋಟ್‌ನಲ್ಲಿ ಕಿರುಕುಳ ನೀಡುತ್ತಿದ್ದವರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಾರಿಜಾ ಅವರನ್ನು ನಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/gSRbEgAA

📲 Get Karnatakanews on Whatsapp 💬