ಹಿಮೋಫಿಲಿಯಾ ಪೀಡಿತರಿಗೆ ಬೇಕಿದೆ ನೆರವು

  |   Davanagerenews

ದಾವಣಗೆರೆ: ಹಿಮೋಫಿಲಿಯಾ ಸಮಸ್ಯೆಯಿಂದ ಬಳಲುವವರ ಚಿಕಿತ್ಸೆ ಮತ್ತು ಪುನರ್ವಸತಿ ಸಂಬಂಧ ಸರ್ಕಾರ ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿದೆ ಎಂದು ಚಿತ್ರನಟಿ ಭಾವನಾ ರಾಮಣ್ಣ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ, ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯಲ್ಲಿ ವಿಶ್ವ ಹಿಮೋಫಿಲಿಯಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ಹಿಮೋಫಿಲಿಯಾ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ಜೊತೆಗೆ ರೋಗಿಗಳ ಆರೈಕೆ ಹಾಗೂ ಅವರ ಪುನರ್ವಸತಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಮೂಲಕ ಡಾ|ಸುರೇಶ್‌ ಹನಗವಾಡಿ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಾ ಹಿಮೋಫಿಲಿಯಾದಿಂದ ಬಳಲುವವರ ಬಾಳಿನಲ್ಲಿ ಬೆಳಕಾಗಿದ್ದಾರೆ. ಇದೆಲ್ಲಕ್ಕಿಂತ ಮಿಗಿಲಾಗಿ ಸರ್ಕಾರಗಳು ಕೂಡ ತಮ್ಮ ಜವಾಬ್ದಾರಿ ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ ಎಂದು ಹೇಳಿದರು.

ಹಿಮೋಫಿಲಿಯಾ ರೋಗಿಗಳ ಬಗ್ಗೆ ಕೆಲಸ ಮಾಡಲು ತಾವೂ ಸಹ ಸಿದ್ಧರಿದ್ದು, ರೋಗದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಮತ್ತು ಚಿಕಿತ್ಸೆ ಸಂಬಂಧ ತಿಳಿವಳಿಕೆ ನೀಡುವ ಸಾಕ್ಷ್ಯಚಿತ್ರ ನಿರ್ಮಿಸುವುದು ಸೂಕ್ತ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ಸರ್ಕಾರಿ ಆಸ್ಪತ್ರೆಗಳಲ್ಲಿ ಡಾಕ್ಯುಮೆಂಟರಿ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು....

ಫೋಟೋ - http://v.duta.us/buiWbgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/mZ4E-QAA

📲 Get Davanagere News on Whatsapp 💬