ಉತ್ತಮ ಆರೋಗ್ಯ ಎಲ್ಲರ ಹಕ್ಕು

  |   Koppalnews

ಯಲಬುರ್ಗಾ: ಉತ್ತಮ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದೆ. ಸರ್ಕಾರಗಳು ನಾನಾ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಿವೆ ಎಂದು ತಾಲೂಕು ಪಂಚಾಯತ್‌ ಅಧ್ಯಕ್ಷೆ ಲಕ್ಷ್ಮೀ ಗೌಡ್ರ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಸ್ವಚ್ಛ ಭಾರತ ಮೀಷನ್‌ ಯೋಜನೆಯಡಿ ತಾಲೂಕು ಯುನಿಸೇಫ್‌ ಘಟಕ, ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ವತಿಯಿಂದ ಹಮ್ಮಿಕೊಂಡ ಮಾದರಿ ಗ್ರಾಮ ಪಂಚಾಯಿತಿಯ ಕ್ಷೇತ್ರಮಟ್ಟದ ಕಾರ್ಯಕರ್ತರಿಗೆ ಹಾಗೂ ಸ್ಥಾಯಿ ಸಮಿತಿ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯರಾದ ನಾವುಗಳು ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಸಾಕಷ್ಟು ಮುಂದುವರಿದಿರುವ ಈ ದಿನಗಳಲ್ಲಿ ಸ್ವಚ್ಛತೆ ಹಾಗೂ ಶೌಚಾಲಯ ಬಳಕೆ ವಿಷಯ ಬಂದಾಗ ನಾವು ಇನ್ನು ಯಾವ ಕಾಲದಲ್ಲಿ ಇದ್ದೇವೆ ಎಂದು ಹೇಳುವುದಕ್ಕೆ ತಲೆತಗ್ಗಿಸಬೇಕಾಗಿದೆ. ಗ್ರಾಮಗಳಲ್ಲಿ ರಚನೆಯಾಗಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಗಳು ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕಿದೆ. ಕುಡಿಯುವ ನೀರಿನ ಮೂಲಗಳ ಸ್ವಚ್ಛತೆಗೆ ಪ್ರತಿ ಗ್ರಾಪಂ ವತಿಯಿಂದ ಬ್ಲೀಚಿಂಗ್‌ ಪುಡಿ ಖರೀದಿ ಮಾಡಿ ಸಿಂಪರಣೆ ಮಾಡುವುದಕ್ಕೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು....

ಫೋಟೋ - http://v.duta.us/OSDmrAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/LQYXzgAA

📲 Get Koppal News on Whatsapp 💬