ಡಿಡಿಪಿಐ ಕ್ರಮದ ವಿರುದ್ಧ ಆಡಳಿತ ಸಮಿತಿ ಪ್ರತಿಭಟನೆ

  |   Udupinews

ಉಡುಪಿ: ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಢಶಾಲೆಯ ಎಲ್ಲ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬಂದಿಯನ್ನು ಶಿಕ್ಷಣ ಸಂಸ್ಥೆಯ ಅನುಮತಿಯಿಲ್ಲದೆ ಡಿಡಿಪಿಐ ಕಚೇರಿಯಿಂದ ನೇರ ಕೌನ್ಸೆಲಿಂಗ್‌ ನಡೆಸಿ ಅವರನ್ನು ಬೇರೆ ಕಡೆಗೆ ವರ್ಗಾಯಿಸುತ್ತಿರುವ ನೀತಿ ಖಂಡಿಸಿ ಶಾಲಾ ಆಡಳಿತ ಮಂಡಳಿ ಹಾಗೂ ಸ್ಥಳೀಯರು ಒಟ್ಟಾಗಿ ಡಿಡಿಪಿಐ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪಂಚನಬೆಟ್ಟು ವಿದ್ಯಾವರ್ಧಕ ಆಡಳಿತ ಸಮಿತಿ ಅಧ್ಯಕ್ಷ ಎ. ನರಸಿಂಹ ತಿಳಿಸಿದ್ದಾರೆ.

8ನೇ ತರಗತಿಗೆ 22 ವಿದ್ಯಾರ್ಥಿಗಳು ಸೇರ್ಪಡೆ

ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸುಮಾರು 29 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಾ ಬಂದಿದೆ.

ಪ್ರಸ್ತುತ ಶಿಕ್ಷಣ ಸಂಸ್ಥೆಯಲ್ಲಿ 42 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅವರಿಗಾಗಿ ಪಂಚನಬೆಟ್ಟು ವಿದ್ಯಾವರ್ಧಕ ಸಂಘದಿಂದ ಉಚಿತ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಾರಿ 8ನೇ ತರಗತಿಗೆ 22 ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣ ಉಪ ನಿರ್ದೇಶಕ ಅವರು 2019-20ನೇ ಸಾಲಿನಲ್ಲಿ ಶಾಲೆ ಪ್ರಾರಂಭಕ್ಕೆ ಅನುಮತಿ ನೀಡಿದ್ದಾರೆ. ಆದರೆ ಇದೀಗಾ ಏಕಾಏಕಿಯಾಗಿ ಶಾಲೆಯ ಎಲ್ಲ 5 ಶಿಕ್ಷಕ ಹಾಗೂ 1 ಸಿಬಂದಿಯನ್ನು ಬೇರೆಕಡೆ ವರ್ಗಾಯಿಸಲು ಕೌನ್ಸೆಲಿಂಗ್‌ ಮಾಡುವ ಮೂಲಕ ವಿದ್ಯಾರ್ಥಿ ಗಳ ಭವಿಷ್ಯಕ್ಕೆ ತೊಂದರೆಯುಂಟು ಮಾಡುತ್ತಿದ್ದಾರೆ ಎಂದರು....

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/LCYhjgAA

📲 Get Udupi News on Whatsapp 💬