ವಿಜೃಂಭಣೆಯ ಮಾಲೇಕಲ್‌ ತಿರುಪತಿ ಮಹಾರಥೋತ್ಸವ

  |   Hassannews

ಅರಸೀಕೆರೆ: ಮೋಡ ಮುಸುಕಿದ ಪರಿಸರದಲ್ಲಿ ನಗರ ಸಮೀಪದ ಅಮರಗಿರಿ ಮಾಲೇಕಲ್‌ ತಿರುಪತಿ ಲಕ್ಷ್ಮೀವೆಂಕಟರಮಣಸ್ವಾಮಿ ಮಹಾರಥೋತ್ಸವವು ಶನಿವಾರ

ಮಧ್ಯಾಹ್ನ ವೈಖಾನಸಾಗಮ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ಸಾವಿರಾರು ಭಕ್ತ ಸಮೂಹದ ನಡುವೆ ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು.

ರಾಜ್ಯದಲ್ಲಿ ಚಿಕ್ಕ ತಿರುಪತಿ ಎಂದೇ ಇತಿಹಾಸ ಪ್ರಸಿದ್ಧಿ ಪಡೆದಿರುವ ಪುಣ್ಯಕ್ಷೇತ್ರ ಅಮರಗಿರಿ ಮಾಲೇಕಲ್‌ ತಿರುಪತಿಯ ಜಾತ್ರಾ ಮಹೋತ್ಸವವು ಪ್ರತಿವರ್ಷ ಆಷಾಢ ಶುದ್ಧ ಪಂಚಮಿಯಂದು ಧ್ವಜಾರೋಹಣ ಮತ್ತು ಅಂಕುರಾರ್ಪಣೆಯಿಂದ ಪ್ರಾರಂಭವಾಗಿ ದ್ವಾದಶಿಯ ದಿನದಂದು ಬೆಳಗ್ಗೆ ಮೂಲ ಸನ್ನಿಧಿಯ ಶ್ರೀ ಗೋವಿಂದರಾಜಸ್ವಾಮಿಯವರಿಗೆ ವಿಶೇಷ ಪಂಚಾಮೃತ ಅಭಿಷೇಕ ಹಾಗೂ ಲಕ್ಷ್ಮೀವೆಂಕಟರಮಣಸ್ವಾಮಿ ಉತ್ಸವಮೂರ್ತಿಗೆ ಪ್ರಾಕಾರೋತ್ಸವ, ಸೂರ್ಯಮಂಡಲೋತ್ಸವ, ರಥ ಮಂಟಪ ಸೇವೆ,

ವಸಂತ ಸೇವೆ ಸೇರಿದಂತೆ ಇತ್ಯಾದಿ ಧಾರ್ಮಿಕ ಪೂಜಾ ಕಾರ್ಯಗಳನ್ನು ವೈಖಾನಸಾಗಮ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ಪುರೋಹಿತ ವೃಂದದವರು ನೆರವೇರಿಸಿದ ನಂತರ ಲಕ್ಷ್ಮೀವೆಂಕಟರಮಣಸ್ವಾಮಿ ಉತ್ಸವಮೂರ್ತಿಯನ್ನು ಮೆರವಣಿಗೆ ಮೂಲಕ ಕರೆ ತಂದು ಮಹಾರಥದಲ್ಲಿ ಪ್ರತಿಷ್ಠಾಪಿಸಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗುವ ಮೂಲಕ ದೇವರಿಗೆ ಪುಷ್ಪಾರ್ಚನೆ ಸಲ್ಲಿಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಣೆ: ಮಹಾರಥೋತ್ಸವ ನೆರವೇರುವ ವೇಳೆಯಲ್ಲಿ ಭಾಗವಹಿಸಿದ್ದ ಸಹಸ್ರಾರು ಮಂದಿ ಭಕ್ತಾದಿಗಳು ಗೋವಿಂದನ ನಾಮಸ್ಮರಣೆ ಮಾಡುತ್ತಾ ಬಾಳೇಹಣ್ಣು, ದವನ ಪುಷ್ಪಗಳನ್ನು ಮಹಾರಥದ ಮೇಲೆ ಎಸೆದು ತಮ್ಮ ಭಕ್ತಿ ಭಾವನೆಗಳನ್ನು ಸಮರ್ಪಿಸಿದರು....

ಫೋಟೋ - http://v.duta.us/l97GTwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/R7B3agAA

📲 Get Hassan News on Whatsapp 💬