ಸಾರ್ವಜನಿಕ ಆಸ್ಪತ್ರೆಯಲ್ಲಿ ಪೌಷ್ಟಿಕ ಪುನರ್ವಸತಿ ಕೇಂದ್ರ ಆರಂಭ

  |   Hassannews

ಬೇಲೂರು: ಚಿಕ್ಕ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಹೋಗಲಾಡಿಸವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಪೌಷ್ಟಿಕ ಪುನರ್ವಸತಿ ಕೇಂದ್ರ ಆರಂಭಿಸಿದೆ.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಪೌಷ್ಟಿಕ ಪುನರ್ವಸತಿ ಕೇಂದ್ರ ಆರಂಭಗೊಂಡಿದ್ದು ತಾಲೂಕಿನಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಿ ಗುಣ ಮಟ್ಟದ ಆಹಾರ ಪದಾರ್ಥಗಳನ್ನು ನೀಡುವ ಮೂಲಕ ಮಕ್ಕಳ ಬೆಳವಣಿಗೆ ಮತ್ತು ಪ್ರಾಥಮಿಕ ಹಂತದ ಶಿಕ್ಷಣಕ್ಕೆ ಈ ಕೇಂದ್ರ ಪೂರಕವಾಗಿದೆ.

5 ವರ್ಷದೊಳಗಿನ ಮಕ್ಕಳಿಗೆ ಚಿಕಿತ್ಸೆ: ತಾಲೂಕಿನ ಅಂಗನವಾಡಿಯಲ್ಲಿ ಕಲಿಯುವ 1ರಿಂದ 5 ವರ್ಷದೊಳಗಿನ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅಂತಹ ಮಕ್ಕಳನ್ನು ಸರ್ಕಾರಿಆಸ್ಪತ್ರೆಯಲ್ಲಿರುವ ಕೇಂದ್ರಕ್ಕೆ ದಾಖಲಿಸಿ 14 ದಿನ ಉತ್ತಮ ಪೌಷ್ಟಿಕ ಆಹಾರ ಮತ್ತು ಚಿಕಿತ್ಸೆ ನೀಡಿ ತೂಕ ಹೆಚ್ಚಳವಾದ ನಂತರ ಮನೆಗೆ ಕಳುಹಿಸಲಾಗುವ ಮಹತ್ತರ ಯೋಜನೆ ಇದಾಗಿದೆ.

ತಾಯಂದಿರಿಗೂ ದಿನಗೂಲಿ ಭತ್ಯೆ: ಕೇಂದ್ರದಲ್ಲಿ ದಾಖಲಾಗುವ ಮಕ್ಕಳಿಗೆ ಉಚಿತ ಔಷಧಿ, ಉಚಿತ ಆಹಾರ, ಉಚಿತ ಆರೋಗ್ಯ ತಾಯಂದಿರಿಗೂ ಉಚಿತ ಆಹಾರ ಮತ್ತು ದಿನಗೂಲಿ ಭತ್ಯೆ ಸಹ ನೀಡಲಾಗುತ್ತಿದ್ದು ಇದರ ಜೋತೆಯಲ್ಲಿ ಮಕ್ಕಳಿಗೆ ಅಗತ್ಯವಾದ ಶಿಕ್ಷಣ ನೀಡುವುದು ಸಹ ಕೇಂದ್ರ ಮುಖ್ಯ ಉದ್ದೇಶವಾಗಿದೆ....

ಫೋಟೋ - http://v.duta.us/byIyFAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/r6TV8QAA

📲 Get Hassan News on Whatsapp 💬