ಅಂಗವಿಕಲರಿಗೆ ಯೋಜನೆಗಳ ಲಾಭ ದೊರಕಿಸಿ: ಪಾಟೀಲ

  |   Bijapur-Karnatakanews

ವಿಜಯಪುರ: ದಿವ್ಯಾಂಗ ಚೇತನರು ಎಲ್ಲರಂತೆ ಉತ್ತಮ ಜೀವನವನ್ನು ಹೊಂದಿ ಎಲ್ಲರೊಂದಿಗೆ ಸಹಬಾಳ್ವೆಯಿಂದ ತಮ್ಮ ಬದುಕನ್ನ ವೃದ್ಧಿಸಿಕೊಳ್ಳಲೆಂದೇ ರೂಪಿತವಾದ ಸರ್ಕಾರದ ಉತ್ತಮ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ನಗರದ ಬಿಎಲ್ಡಿಇ ಆಸ್ಪತ್ರೆಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕೃತಕ ಅಂಗಾಂಗ ಜೋಡಣೆ ಸಾಧನ ಸಲಕರಣೆಗಳ ಉಚಿತ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸಲಕರಣೆ ವಿತರಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವಿನ ಸಂಬಂಧ ವೃದ್ಧಿಯಾಗಿ ಸರ್ಕಾರಿ ಸೌಲಭ್ಯಗಳು ಜನರಿಗೆ ನೇರವಾಗಿ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿ ವೃಂದದವರು ಸಂಘ ಸಂಸ್ಥೆಗಳ ಸಹಕಾರದಿಂದ ಕಾರ್ಯ ಪ್ರವೃತ್ತರಾಗುವಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲ ತಾಲೂಕು ಮತ್ತು ಗ್ರಾಮಾಂತರ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾದ ದಿವ್ಯಾಂಗ ಚೇತನರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವುದರ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಬೇಕೆಂದು ಹೇಳಿದರು....

ಫೋಟೋ - http://v.duta.us/aynBawAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/U0-5FwAA

📲 Get Bijapur Karnataka News on Whatsapp 💬