ಜನಪ್ರತಿನಿಧಿಗಳಿಗೆ ಪತ್ರಕರ್ತರು ಅಂಕುಶ ಹಾಕಲಿ: ದೇವೇಂದ್ರಪ್ಪ

  |   Bellarynews

ಹೊಸಪೇಟೆ: ಪತ್ರಕರ್ತರು ಜನಪ್ರತಿನಿಧಿಗಳಿಗೆ ಅಂಕುಶ ಹಾಕಬೇಕು. ಆಗ ಅವರು ಎಚ್ಚರಿಕೆಯಿಂದ ಇರುತ್ತಾರೆ ಎಂದು ಸಂಸದ ವೈ. ದೇವೇಂದ್ರಪ್ಪ ಹೇಳಿದರು.

ನಗರದ ಗುಂಡಾ ಸಸ್ಯ ಉದ್ಯಾನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕವು ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಕ್ರಮ, ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು.

ಶಾಸಕ ಆನಂದ ಸಿಂಗ್‌ ಮಾತನಾಡಿ, ಬ್ರೇಕಿಂಗ್‌ ಸುದ್ದಿಯಿಂದ ಮಾಧ್ಯಮಗಳು ಹೊರಗಡೆ ಬರಬೇಕು. ವಾಸ್ತವ ಸುದ್ದಿಗಳನ್ನು ಬಿತ್ತರಿಸಬೇಕು. ಸಮಾಜವನ್ನು ಸರಿದಾರಿಯಲ್ಲಿ ನಡೆಸುವಂತ ಜವಾಬ್ದಾರಿ ಅವರ ಮೇಲಿದೆ. ಅವರು ಅದನ್ನು ಸರಿಯಾಗಿ ನಿಭಾಯಿಸಬೇಕು ಎಂದು ಹೇಳಿದರು.

ಸೈನಿಕರು ದೇಶದ ಗಡಿಯನ್ನು ರಕ್ಷಣೆ ಮಾಡುತ್ತಾರೆ. ಆದರೆ, ಪತ್ರಕರ್ತರು ದೇಶದ ಒಳಗಿನ ಸಮಾಜವನ್ನು ಕಾಯುವ ಸೈನಿಕರು. ಹೊಗಳಿಕೆ ಮತ್ತು ತೆಗಳಿಕೆಯನ್ನು ಸಮಾನವಾಗಿ ಸ್ವೀಕರಿಸಬೇಕು. ಪತ್ರಕರ್ತರಿಗೆ ನಿವೇಶನ ನೀಡಲು ಅಗತ್ಯ ಸಹಕಾರವನ್ನು ನೀಡಲಾಗುವುದು ಎಂದು ಹೇಳಿದರು.

ಪ್ರಸ್ತುತ ಪತ್ರಿಕೋದ್ಯಮ ಎದುರಿಸುತ್ತಿರುವ ಬಿಕ್ಕಟ್ಟುಗಳು ಕುರಿತು ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಮಾತನಾಡಿ, ಆರೋಗ್ಯ ಪೂರ್ಣವಾದ ಸಮಾಜ ಹಾಗೂ ಕನ್ನಡ ಸಾಹಿತ್ಯವನ್ನು ಬೆಳೆಸಬೇಕು. ಶಿಕ್ಷಕ ಹಾಗೂ ಪತ್ರಕರ್ತರ ಹುದ್ದೆಗಳು ಕೃತಜ್ಞತೆಯಿಂದ ಕೂಡಿವೆ. ಅವರು ಮೌಲ್ಯಗಳೊಂದಿಗೆ ಬದ್ಧರಾಗಿರಬೇಕಾಗುತ್ತದೆ. ವಯಕ್ತಿಯ ನಿಲುವುಗಳನ್ನು ಒದಿಗೊತ್ತಿ ಸಮಾಜ ಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಪತ್ರಕರ್ತ ಬಸಾಪುರ ಬಸವರಾಜ ಪ್ರಾಸ್ತಾವಿಕ ಮಾತನಾಡಿದರು....

ಫೋಟೋ - http://v.duta.us/-WwEcwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/QGNAuAAA

📲 Get Bellary News on Whatsapp 💬