ನಾಲ್ವಡಿ, ಸರ್‌ಎಂವಿ ಪುತ್ಥಳಿ ನಿರ್ಮಾಣಕ್ಕೆ ಚಾಲನೆ

  |   Mandyanews

ಶ್ರೀರಂಗಪಟ್ಟಣ; ತಾಲೂಕಿನ ವಿಶ್ವವಿಖ್ಯಾತ ಕೆಆರ್‌ಎಸ್‌ ಬೃಂದಾವನದ ಮುಂಭಾಗ ದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಸರ್‌.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿ ನಿರ್ಮಾಣಕ್ಕೆ ಶಾಸಕ ರವೀಂದ್ರ ಶ್ರೀಕಂಠಯ್ಯ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಆರಾಧ್ಯ ದೈವ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಸರ್‌.ಎಂ.ವಿಶ್ವೇಶ್ವರಯ್ಯರವರು ದೇಶ ಕಂಡ ಅಪರೂಪದ ವ್ಯಕ್ತಿಗಳು ಅವರ ಪುತ್ಥಳಿಯನ್ನು ಸುಮಾರು 8 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ಈ ಭಾಗದ ಜನರು ಬೇಡಿಕೆಯಂತೆ ಈಗ ಅದು ಸರ್ಕಾರದಿಂದ ನೆರವೇರಿಸಲಾಗುತ್ತಿದೆ. ಕೆಆರ್‌ಎಸ್‌ ಬೃಂದಾವನದ ಹೆಬ್ಟಾಗಿಲ ಮುಂದೆ ಇದನ್ನು ಸ್ಥಾಪಿಸಲಾಗುವುದು ಎಂದರು. ಈ ಇಬ್ಬರು ಮಹಾನ್‌ ವ್ಯಕ್ತಿಗಳನ್ನು ಮಂಡ್ಯ ಜಿಲ್ಲೆಯ ಜನ ಸದಾ ನೆನೆಯುವಂತೆ ಮಾಡುವ ವಾತಾವರಣ ಸೃಷ್ಟಿಸಲು ಸ್ಥಳೀಯರು, ಪ್ರವಾಸಿಗರು ಕೆಆರ್‌ಎಸ್‌ ಮಹಾದ್ವಾರದ ಮುಂಭಾಗ ಗುದ್ದಲಿ ಪೂಜೆ ನೆರವೇರಿಸಿದ್ದೇವೆ. ಶೀಘ್ರದಲ್ಲೇ ಈ ಕೆಲಸ ಪ್ರಾರಂಭಗೊಳ್ಳಲಿದೆ ಎಂದು ಹೇಳಿದರು.

ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್‌ ರಾಮಕೃಷ್ಣ, ಸಹಾಯಕ ಕಾರ್ಯ ಪಾಲಕರಾದ ತಮ್ಮೇಗೌಡ, ವಾಸುದೇವ್‌, ಗ್ರಾಪಂ ಮಾಜಿ ಅಧ್ಯಕ್ಷ ಎಂ.ಬಿ.ಕುಮಾರ್‌, ಮಾಜಿ ಉಪಾಧ್ಯಕ್ಷ ರಾಜು, ಗುತ್ತಿಗೆ ದಾರ ಸೇರಿ ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಫೋಟೋ - http://v.duta.us/ezBOCwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/PuyeAQAA

📲 Get Mandya News on Whatsapp 💬