ಬೇಡಿಕೆ ಈಡೇರಿಕೆಗೆ ಒತ್ತಾಯ

  |   Bijapur-Karnatakanews

ಮುದ್ದೇಬಿಹಾಳ: ತಮ್ಮ 9 ಪ್ರಮುಖ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸೇವಾ ಸಂಘದ ನೂರಾರು ಸದಸ್ಯರು ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷೆ ನೀಲಮ್ಮ ಬೋರಾವತ್‌ ಅವರು, ಜೂ. 24ರಂದು ಸಮಸ್ಯೆ ಬಗೆಹರಿಸುವಂತೆ ಕೋರಿ ಸಿಡಿಪಿಒಗೆ ಮನವಿ ಸಲ್ಲಿಸಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿದ್ದ ಮತ್ತು ಸೂಕ್ತ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಸಿಡಿಪಿಒ ಅವರು ತಮ್ಮ ನಡವಳಿಕೆ ತಿದ್ದಿಕೊಳ್ಳಬೇಕು ಎಂದು ಹರಿಹಾಯ್ದರು.

ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ 4 ತಿಂಗಳಿಂದ ಆಗದಿರುವ ಗೌರವ ಧನ ಕೂಡಲೇ ಬಿಡುಗಡೆ ಮಾಡಿ ಅವರ ಖಾತೆಗೆ ಜಮಾ ಮಾಡಬೇಕು. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ, ಬಾಣಂತಿಯರಿಗೆ ಒದಗಿಸಿದ ಮೊಟ್ಟೆ, ತರಕಾರಿ ಬಿಲ್ 3 ತಿಂಗಳದ್ದು ಮಾತ್ರ ಮಾಡಿದ್ದು ಇನ್ನೂ 9 ತಿಂಗಳ ಬಿಲ್ ಮಾಡಬೇಕು.

ಮಕ್ಕಳಿಗೆ ನೀಡುವ ಮೊಟ್ಟೆಯ 2 ವರ್ಷದ ಬಿಲ್ ಮಾಡಿ ಮಕ್ಕಳಿಗೆ ಮೊಟ್ಟೆ ಕೊಡುವಲ್ಲಿ ಆಗುತ್ತಿರುವ ಸಮಸ್ಯೆ ತಪ್ಪಿಸಬೇಕು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳ 2 ವರ್ಷದ ಬಾಡಿಗೆ ಹಣವನ್ನು ಸಂಬಂಸಿದ ಕಟ್ಟಡ ಮಾಲಿಕರಿಗೆ ಸಂದಾಯ ಮಾಡಬೇಕು ಎಂದರು....

ಫೋಟೋ - http://v.duta.us/S0zYYwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/NDdIVgAA

📲 Get Bijapur Karnataka News on Whatsapp 💬