ಶೌಚಾಲಯ ಕಾಮಗಾರಿ ಮುಗಿಸಿ

  |   Davanagerenews

ಹೊನ್ನಾಳಿ: ತಮಗೆ ನೀಡಿರುವ ಗುರಿ ಪ್ರಕಾರ ಈ ತಿಂಗಳ ಅಂತ್ಯದೊಳಗೆ ಅವಳಿ ತಾಲೂಕಿನಲ್ಲಿ ಶೌಚಾಲಯಗಳನ್ನು ನಿರ್ಮಾಣ ಕಾಮಗಾರಿ ಮುಗಿಸಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿ.ಪಂ ಉಪಕಾಯದರ್ಶಿ ಎಲ್.ಭೀಮಾನಾಯ್ಕ ಪಿಡಿಒಗಳಿಗೆ ಎಚ್ಚರಿಕೆ ನೀಡಿದರು.

ತಾಪಂನ ಸಾಮರ್ಥ್ಯಸೌಧದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅವಳಿ ತಾಲೂಕಿನಲ್ಲಿ ಶೌಚಾಲಯ ನಿರ್ಮಾಣ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಬಾಕಿ ಇರುವ ಶೌಚಾಲಯ ನಿರ್ಮಾಣಕ್ಕೆ ತಕ್ಷಣ ಕ್ರಿಯಾಯೋಜನೆ ತಯಾರಿಸಿ ಜಿಪಂಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು.

ನಿವೇಶನ ರಹಿತರಿಗೆ ಸೂರು ನೀಡಬೇಕೆಂಬುದು ಸರ್ಕಾರದ ನಿರ್ಧಾರ ವಾಗಿರುವುದರಿಂದ ಅವಳಿ ತಾಲೂಕಿನಲ್ಲಿ ಎಲ್ಲೆಲ್ಲಿ ನಿವೇಶನ ರಹಿತರು ಇರುತ್ತಾರೋ ಅಂತಹ ಅರ್ಹ ಫಲಾನುಭವಿಗಳ ಪಟ್ಟಿ ಮಾಡಿ ಅಂತಹವರಿಗೆ ನಿವೇಶನ ನೀಡಲು ಜಮೀನನ್ನು ಕಾಯ್ದಿರಿಸಬೇಕು ಎಂದು ತಿಳಿಸಿದರು.

ನರೇಗ ಯೋಜನೆಡಿಯಲ್ಲಿ ಕೂಲಿ ಆಧಾರಿತ, ಚೆಕ್‌ ಡ್ಯಾಂ ನಿರ್ಮಾಣ, ಸಸಿ ನೆಡುವ ಕಾರ್ಯಗಳಿಗೆ ಹೆಚ್ಚು ಒತ್ತು ನೀಡಿ ಕಾಮಗಾರಿಗಳನ್ನು ಈ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಪಿಡಿಒಗಳಿಗೆ ತಾಕಿತು ಮಾಡಿದ ಅವರು, ಎಲ್ಲಿಯೂ ಕಳಪೆ ಕಾಮಗಾರಿಗೆ ಆಸ್ಪದ ನೀಡಬಾರದು ಎಂದರು....

ಫೋಟೋ - http://v.duta.us/2QkdewAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/9ovVFgAA

📲 Get Davanagere News on Whatsapp 💬