ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಚಿತ್ತ ಹರಿಸಿ: ಹೆಗಡೆ

  |   Uttara-Kannadanews

ಭಟ್ಕಳ: ಶರಾವತಿ ನದಿ ದಂಡೆಯ ಈ ಭಾಗದ ವಿದ್ಯಾರ್ಥಿಗಳು ಅತ್ಯಂತ ಬುದ್ಧಿವಂತರಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಾದ ಐಎಎಸ್‌, ಕೆಎಎಸ್‌ಗಳತ್ತ ಚಿತ್ತ ಹರಿಸಬೇಕು ಎಂದು ಜಿಪಂ ಹೊನ್ನಾವರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಎಂ.ವಿ. ಹೆಗಡೆ ಕರೆ ನೀಡಿದರು.

ತಾಲೂಕು ಹವ್ಯಕ ಬ್ರಾಹ್ಮಣ ನೌಕರರ ಕ್ಷೇಮಾಭಿವೃದ್ಧಿ ಸಂಘವು ಕಡವಿನಕಟ್ಟೆ ಶ್ರೀ ಜಗನ್ಮಾತಾ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಂಕಿಯ ಖ್ಯಾತ ವೈದ್ಯ ಡಾ| ಗಣಪತಿ ಸಭಾಹಿತ ಮಾತನಾಡಿ, ತಂದೆ-ತಾಯಿಯರಾಗಿ ಮಕ್ಕಳನ್ನು ಬೆಳೆಸುವ ಕೆಲಸ ಜೀವನದಲ್ಲಿ ಅತ್ಯಂತ ಕಷ್ಟದ ಕೆಲಸವಾಗಿದೆ. ಮಕ್ಕಳ ಭವಿಷ್ಯವನ್ನು ಅವರ ಹದಿಹರೆಯದಲ್ಲಿ ನಿರ್ಣಯಿಸುವುದು ಅತ್ಯಂತ ಕಠಿಣವಾದ ಕೆಲಸ. ಅಂತಹ ವಯಸ್ಸಿನಲ್ಲಿ ಮಕ್ಕಳ ಮನಸ್ಥಿತಿ ಅರಿತು ಅವರ ಆಸಕ್ತಿಯ ಕ್ಷೇತ್ರವನ್ನು ಆಯ್ದುಕೊಳ್ಳುವಂತೆ ಮಾಡಬೇಕು. ನಮ್ಮ ಶಿಕ್ಷಣ ಪದ್ಧತಿಯು ಬದಲಾಗಬೇಕು. ವಿದೇಶದಲ್ಲಿ ವಿದ್ಯಾರ್ಥಿಗಳಿಗೆ ಇರುವ ವಿಷಯದ ಆಯ್ಕೆಯು ನಮ್ಮಲ್ಲಿ ಇಲ್ಲವಾಗಿದೆ. ಇದರಿಂದ ಅನೇಕ ವಿದ್ಯಾರ್ಥಿಗಳು ಒಲ್ಲದ ವಿಷಯವನ್ನು ಅಭ್ಯಾಸ ಮಾಡುವ ಅನಿವಾರ್ಯತೆ ಬರುತ್ತದೆ ಎಂದು ಹೇಳಿದರು....

ಫೋಟೋ - http://v.duta.us/j3UjrAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/GD20jwAA

📲 Get Uttara Kannada News on Whatsapp 💬