ಹರಿಜನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯ

  |   Belgaumnews

ಬೆಳಗಾವಿ: ನಗರದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ನಿರ್ವಾಹಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರುಕುಳ ನೀಡಿದವರನ್ನು ಶೀಘ್ರವೇ ಅಮಾನತು ಮಾಡುವಂತೆ ದಲಿತ ಸಂಘಟನೆಗಳ ಕಾರ್ಯಕರ್ತರು ರವಿವಾರ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದರು.

ಇತ್ತೀಚೆಗೆ ಕೆಲವು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿ ಡಿಪೋಗೆ ವರ್ಗಾವಣೆಗೊಂಡಿದ್ದ ತಾಲೂಕಿನ ಕೇದನೂರ ಗ್ರಾಮದ ಆನಂದ ಹರಿಜನ (52) ಎಂಬ ನಿರ್ವಾಹಕ ಡಿಪೋ ಸಂಖ್ಯೆ2ರಲ್ಲಿ ನೇಣು ಬಿಗಿದುಕೊಂಡು ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ರವಿವಾರ ಬೆಳಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ದಲಿತ ಸಂಘಟನೆಯವರು ಹಾಗೂ ಸಿಬ್ಬಂದಿ ಪ್ರತಿಭಟನೆಗೆ ಮುಂದಾದರು. ಕಿರುಕುಳ ನೀಡಿದವರನ್ನು ಅಮಾನತು ಮಾಡುವವರೆಗೆ ಮೃತದೇಹ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು.

ಬೆಳಗಾವಿ ಡಿಪೋದಲ್ಲಿಯೇ ಅನೇಕ ವರ್ಷಗಳಿಂದ ಆನಂದ ಹರಿಜನ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ದಿಢೀರ್‌ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಸಿಬ್ಬಂದಿ ಕಿರುಕುಳದಿಂದಲೇ ನಿರ್ವಾಹಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪದೇ ಪದೇ ಕಿರುಕುಳ ನೀಡಿದ್ದರಿಂದ ನಿರ್ವಾಹಕ ಆನಂದ ಹರಿಜನ ಮನನೊಂದಿದ್ದರು. ಈ ಸಾವಿನಿಂದ ಅವರ ಕುಟುಂಬ ಅನಾಥವಾಗಿದ್ದು, ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಹರಿಜನ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು. ಕೂಡಲೇ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು....

ಫೋಟೋ - http://v.duta.us/6NNwZgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/SSc_5QAA

📲 Get Belgaum News on Whatsapp 💬