ಕೆಎಸ್‌ಆರ್‌ಟಿಸಿ ನಿಲ್ದಾಣಗಳಲ್ಲಿ ತಪಾಸಣೆ

  |   Bangalore-Citynews

ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಭಯೋತ್ಪಾದಕರು ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲ ಪ್ರಮುಖ ನಿಲ್ದಾಣಗಳಲ್ಲಿ ಹಾಗೂ ಬಸ್‌ಗಳಲ್ಲಿ ಶನಿವಾರ ತೀವ್ರ ತಪಾಸಣೆ ನಡೆಸಲಾಯಿತು. ಅಲ್ಲದೆ, ಭದ್ರತೆಗೆ ಸಂಬಂಧಿಸಿದಂತೆ ಹಲವು ಮುಂಜಾಗ್ರತಾ ಕ್ರಮಗಳಿಗೆ ಸೂಚಿಸಲಾಯಿತು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ನಗರಗಳಿಗೆ ಕಾರ್ಯಾಚರಣೆ ಮಾಡುವ ಫ್ಲೈಬಸ್‌ಗಳು, ಪ್ರತಿಷ್ಠಿತ ವೋಲ್ವೊ, ಮಲ್ಟಿ ಆಕ್ಸೆಲ್, ಅಂಬಾರಿ ಮುಂತಾದ ಬಸ್‌ಗಳಲ್ಲಿ ತೆಗೆದುಕೊಂಡು ಹೋಗುವ ಲಗೇಜುಗಳನ್ನು ಕೂಲಂಕಷವಾಗಿ ತನಿಖೆಗೊಳಪಡಿಸಬೇಕು. ಆಯಾ ನಿಲ್ದಾಣ/ ಘಟಕಗಳ ವ್ಯಾಪ್ತಿಯಲ್ಲಿನ ಸಿಸಿ ಕ್ಯಾಮೆರಾಗಳನ್ನು ಸುಸ್ಥಿಯಲ್ಲಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

ಅಲ್ಲದೆ, ವಾಹನ ನಿಲ್ದಾಣಗಳಲ್ಲಿ ಸಾರ್ವಜನಿಕರ ಗಮನಕ್ಕೆ ಧ್ವನಿವರ್ಧಕದ ಮೂಲಕ ಅರಿವು ಮೂಡಿಸಬೇಕು. ಪ್ರತಿ ಗಂಟೆಗೊಮ್ಮೆ ವಿಭಾಗದ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ, ಸ್ಥಳೀಯ ಪೊಲೀಸ್‌ ಅಧಿಕಾರಿಗಳ ನೆರವಿನೊಂದಿಗೆ ವಿಧ್ವಂಸಕ ಕೃತ್ಯ ಪರಿಶೀಲನಾ ತಂಡದಿಂದ ಕಾಲ ಕಾಲಕ್ಕೆ ಅನಿರೀಕ್ಷಿತ ತಪಾಸಣೆ ನಡೆಸಬೇಕು. ವಿಭಾಗೀಯ ಕಚೇರಿ/ ಘಟಕ/ ಕಾರ್ಯಾಗಾರ/ ತರಬೇತಿ ಕೇಂದ್ರ/ ಬಸ್‌ ನಿಲ್ದಾಣಗಳ ಪ್ರವೇಶ ದ್ವಾರಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸೂಚಿಸಿದ್ದಾರೆ. ಈ ಮಧ್ಯೆ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ, ಶಾಂತಿನಗರ, ಮೈಸೂರು ರಸ್ತೆ ಸ್ಯಾಟಲೈಟ್ ಬಸ್‌ ನಿಲ್ದಾಣಗಳು ಸೇರಿ ನಿಗಮದ ವ್ಯಾಪ್ತಿಯಲ್ಲಿ ಜಿಲ್ಲಾಮಟ್ಟದಲ್ಲಿನ ಪ್ರಮುಖ ನಿಲ್ದಾಣಗಳಲ್ಲಿ ಭದ್ರತಾ ಮತ್ತು ಜಾಗೃತ ವಿಭಾಗದ ಸಿಬ್ಬಂದಿಯಿಂದ ತಪಾಸಣೆ ನಡೆಸಲಾಯಿತು.

ಫೋಟೋ - http://v.duta.us/uSQaVAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/BGqFiQAA

📲 Get Bangalore City News on Whatsapp 💬