ಬೆಳೆ ಹಾನಿ ಸಮೀಕ್ಷೆ ಚುರುಕುಗೊಳಿಸಲು ಸಲಹೆ

  |   Kalburaginews

ಕಲಬುರಗಿ: ಭೀಮಾ ನದಿ ಪ್ರವಾಹದಿಂದ ಹಾನಿಗೊಳಗಾದ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮಕ್ಕೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ಶನಿವಾರ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದರು.

ಪ್ರವಾಹಕ್ಕೆ ತೊಗರಿ, ಕಬ್ಬು ಮತ್ತು ಹತ್ತಿ ಬೆಳೆಗಳು ಹಾಳಾದ ಹೊಲಗಳಿಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಬೆಳೆ ಹಾನಿ ಬಗ್ಗೆ ಗಮನಕ್ಕೆ ಬಂದಿದೆ. ಬೆಳೆ ಹಾನಿಯಾಗಿರುವ ಪ್ರದೇಶದಲ್ಲಿ ಕೂಡಲೇ ಬೆಳೆ ಸಮೀಕ್ಷೆ ಕಾರ್ಯ ಚುರುಕುಗೊಳಿಸಿ ರೈತರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಮಾತನಾಡಿ, ಜಿಲ್ಲಾದ್ಯಂತ ಈಗಾಗಲೇ ಬೆಳೆ ಹಾನಿ ಕುರಿತಂತೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಭೀಮಾ ನದಿ ತೀರದ ಕೆಲ ಗ್ರಾಮಗಳಲ್ಲಿ ಮನೆ, ಬೆಳೆ ಹಾನಿಗೊಳಗಾದರೆ, ಇನ್ನು ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದರು.

ನೆಲೋಗಿ ಜಿಪಂ ಸದಸ್ಯೆ ದೇವಕಿ ಚನ್ನಮಲ್ಲಯ್ಯ ಹಾಗೂ ಗ್ರಾಮಸ್ಥರು ಮಾತನಾಡಿ, ಭೀಮಾ ಪ್ರವಾಹದಿಂದ ನದಿ ದಂಡೆಯಲ್ಲಿ ಬೆಳೆಯಲಾದ ಬಹುತೇಕ ಬೆಳೆಗಳು ಸಂಪೂರ್ಣ ಕೊಚ್ಚಿಕೊಂಡು ಹೋಗಿವೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಅರಿವಿಲ್ಲದೆ ಗ್ರಾಮದ ಬಹುತೇಕ ರೈತರು ಬೆಳೆ ವಿಮೆ ಮಾಡಿಸಿಲ್ಲ. ಹೀಗಾಗಿ ಬೆಳೆ ವಿಮೆ ಮಾಡಿಸದ ರೈತರಿಗೂ ಸೂಕ್ತ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು....

ಫೋಟೋ - http://v.duta.us/5SoS9gAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/upM5pAAA

📲 Get Kalburagi News on Whatsapp 💬