ಮಕ್ಕಳಿಂದ ಶೌಚಾಲಯ ಸ್ವಚ್ಛ: ಆಕ್ರೋಶ

  |   Bangalore-Citynews

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕು, ಕಾಚೋಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಲೆಗಳಲ್ಲಿ ಮಕ್ಕಳಿಂದ ಶಾಲಾ ಶೌಚಾಲಯ ಶುಚಿಗೊಳಿಸಿರುವ ವಿಷಯ ಶನಿವಾರ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿ, ಇದಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಪಕ್ಷಭೇದ ಮರೆತು ಸದಸ್ಯರು ಒತ್ತಾಯಿಸಿದರು.

ಈ ಕುರಿತು ವಿಷಯ ಪ್ರಸ್ತಾಪಿಸಿ ಮಾತನಾಡಿದ ಸದಸ್ಯರು, ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿ, ಇದೊಂದು ತಲೆತಗ್ಗಿಸುವ ವಿಚಾರವಾಗಿದ್ದು, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶೈಕ್ಷಣಿಕ ವಿಷಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ವಿಷಯ ಪ್ರಸ್ತಾಪಿಸಿದ ಜಿಲ್ಲಾ ಪಂಚಾಯ್ತಿ ಸದಸ್ಯ ಉಮೇಶ್‌, ಬೆಂಗಳೂರು ಉತ್ತರ ತಾಲೂಕು ಕಾಚೋಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಲೆಗಳಲ್ಲಿ ಮಕ್ಕಳಿಂದ ಶಾಲಾ ಶೌಚಾಲಯಗಳನ್ನು ಶುಚಿಗೊಳಿಸಲಾಗುತ್ತಿದ್ದು, ಆ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಶಾಲಾ ಶೌಚಾಲಯಗಳ ಶುಚಿತ್ವಕ್ಕಾಗಿ ಜಿಲ್ಲಾ ಪಂಚಾಯ್ತಿಯಿಂದ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಆದರೂ ಬಳಕೆ ಮಾಡುತ್ತಿಲ್ಲ. ಇಂತಹ ಅವ್ಯವಸ್ಥೆಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ವೇಳೆ ಉತ್ತರ ವಲಯ ವಿಭಾಗದ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ, ಕಾಚೋಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಶೌಚಾಲಯ ಶುಚಿಗೊಳಿಸಲು ಆಯಾಗಳನ್ನು ನೇಮಿಸಲಾಗಿದೆ. ಜೊತೆಗೆ ಕಾಚೋನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸ್ವಚ್ಛಗೊಳಿಸಲು ಪಂಚಾಯ್ತಿ ನೀಡಿರುವ ಅನುದಾನದಲ್ಲಿ ಶುಚಿತ್ವದ ಕಾರ್ಯ ಕೈಗೊಳ್ಳಲಾಗಿದೆ. ಇದರಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಣೆ ನೀಡಲು ಮುಂದಾದರು....

ಫೋಟೋ - http://v.duta.us/17OekAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/4fC_EQAA

📲 Get Bangalore City News on Whatsapp 💬