ಮುದ್ದು ಮಕ್ಕಳ ಜಾತ್ರೆಗೆ ಸಹಸ್ರ ಭಕ್ತ ದರ್ಶನ

  |   Udupinews

ಹೆಬ್ರಿ: ಉಡುಪಿ ತಾಲೂಕಿನ ಪೆರ್ಡೂರು ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಆ. 17 ಸಿಂಹ ಸಂಕ್ರಮಣ ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿಯಾಗಿದ್ದು, ಮದುಮಕ್ಕಳು ಸೇರಿದಂತೆ ಸಹಸ್ರಾರು ಭಕ್ತರು ದೇವರ ದರ್ಶನ ಪಡೆದರು.

ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಿನಲ್ಲಿ ಜನಕಂಡು ಬಂದರೂ ಕಳೆದ ವರ್ಷದಷ್ಟು ಜನಸಾಗರವಿರಲಿಲ್ಲ. ಉಡುಪಿ ಜಿಲ್ಲೆಯಿಂದ ಮಾತ್ರವಲ್ಲದೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರದ ದರ್ಶನಕ್ಕೆ ಬರುವುದು ಇಲ್ಲಿಯ ವಿಶೇಷವಾಗಿದ್ದರೂ ಈ ಬಾರಿ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಬೈಂದೂರು ಪ್ರದೇಶದಿಂದ ಭಕ್ತರ ಸಂಖ್ಯೆ ಕಡಿಮೆ ಇತ್ತು. 12 ಸಂಕ್ರಮಣಗಳೂ ಇಲ್ಲಿ ವಿಶೇಷ. ಸಿಂಹ ಸಂಕ್ರಮಣ ಮದುಮಕ್ಕಳ ಜಾತ್ರೆ ಎಂದು ಪ್ರಸಿದ್ಧಿ ಪಡೆದಿದ್ದು, ಹೊಸದಾಗಿ ಮದುವೆ ಯಾದ ಮದುಮಕ್ಕಳು ದೇವರ ದರ್ಶನ ಮಾಡಿ ಹೋಗುವ ಸಂಪ್ರದಾಯವಿದೆ.

ಧಾರ್ಮಿಕ ಕಾರ್ಯಕ್ರಮ, ಅನ್ನಸಂತರ್ಪಣೆ

ಸಿಂಹ ಸಂಕ್ರಮಣ ಅಂಗವಾಗಿ ಸತ್ಯನಾರಾಯಣ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಅರ್ಚಕ ಜಗದೀಶ್‌ ಅಡಿಗ ಅವರ ನೇತೃತ್ವದಲ್ಲಿ ನಡೆದವು. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸುಮಾರು 8 ಮಂದಿ ಸಾವಿರ ಭಕ್ತರು ಅನ್ನ ಪ್ರಸಾದ ಸೇವಿಸಿದರು....

ಫೋಟೋ - http://v.duta.us/v9DdIwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/cKL77wAA

📲 Get Udupi News on Whatsapp 💬