ಹೈ ಅಲರ್ಟ್‌: ಜಿಲ್ಲೆಯಲ್ಲಿ ಎಚ್ಚರಿಕೆ ಕ್ರಮ

  |   Ramnagaranews

ರಾಮನಗರ: ರಾಜ್ಯದಲ್ಲಿ ಉಗ್ರರ ದಾಳಿ ನಡೆಯಬಹುದು ಎಂಬ ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೈ ಅಲರ್ಟ್‌ ಘೋಷಿಸಿದ್ದು, ಜಿಲ್ಲಾ ಕೇಂದ್ರ ರಾಮನಗರದಲ್ಲಿಯೂ ಪೊಲೀಸರು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿದೆ.

ನಗರದ ರೈಲು ನಿಲ್ದಾಣ, ಬಸ್‌ ನಿಲ್ದಾಣದಲ್ಲಿ ಪ್ರಮುಖ ವೃತ್ತಗಳಲ್ಲಿ ಪೊಲೀಸ್‌ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಕಣ್ಗಾವಲು ವಹಿಸಿದ್ದಾರೆ. ಇದಲ್ಲದೇ ಜನನಿಬಿಡ ಪ್ರದೇಶಗಳಲ್ಲಿಯೂ ಪೊಲೀಸ್‌ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ.

ರೈಲು ನಿಲ್ದಾಣದಲ್ಲಿ ತುಕಡಿ ನಿಯೋಜನೆ: ರೈಲು ನಿಲ್ದಾಣದ ಆವರಣದಲ್ಲಿ ಜಿಲ್ಲಾ ಪೊಲೀಸ್‌ ಪಡೆಯ ಒಂದು ತುಕಡಿ ನಿಯೋಜನೆ ಆಗಿದೆ. ರೈಲು ನಿಲ್ದಾಣದ ಒಳಗೆ ನಗರ ಪೊಲೀಸ್‌ ಠಾಣೆಯ ಮೂವರು ಪೊಲೀಸರು, ರೈಲ್ವೆ ಪೊಲೀಸ್‌ನ ಮೂವರು ಹಾಗೂ ರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌ನ ಎಎಸ್‌ಐ ಗಸ್ತುವಹಿಸಿದ್ದಾರೆ.

ಅನುಮಾನಸ್ಪದ ವ್ಯಕ್ತಿಗಳು, ವಸ್ತುಗಳು ಕಂಡರೆ ತಿಳಿಸಿ: ಈ ವೇಳೆ ಪತ್ರಿಕೆಯೊಂದಿಗೆ ಮಂಡ್ಯ ವಿಭಾಗದ ರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌ನ ಎ.ಎಸ್‌. ಐ ಪರಮೇಶ್‌ ಮಾತನಾಡಿ, ರಾಜ್ಯದಲ್ಲಿ ಹೈ ಅಲರ್ಟ್‌ ಘೋಷಣೆಯಾಗಿರುವುದರಿಂದ ಹೆಚ್ಚುವರಿ ಪೊಲೀಸರನ್ನು ರೈಲು ನಿಲ್ದಾಣದಲ್ಲಿ ನಿಯೋಜಿಸಲಾಗಿದೆ. ಅಲ್ಲದೆ, ರೈಲ್ವೆ ಪೊಲೀಸರು ಸಹ ಹೆಚ್ಚಿನ ನಿಗಾ ವಹಿಸಿದ್ದಾರೆ. ಅನುಮಾನಸ್ಪದ ವ್ಯಕ್ತಿಗಳು, ವಸ್ತುಗಳು ಕಂಡು ಬಂದರೆ ಪ್ರಯಾಣಿಕರು ತಕ್ಷಣ ಪೊಲೀಸರ ಗಮನ ಸೆಳೆಯಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ....

ಫೋಟೋ - http://v.duta.us/9OgaUQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/3VlmXAAA

📲 Get Ramnagara News on Whatsapp 💬