23ರಂದು ನಿವೃತ್ತ ನೌಕರರ ಪಿಂಚಣಿ ಅದಾಲತ್‌

  |   Kalburaginews

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಪಿಂಚಣಿ ಸಮಸ್ಯೆ ಬಗೆಹರಿಸಲು ರಾಷ್ಟ್ರಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಆ. 23ರಂದು ಪಿಂಚಣಿ ಅದಾಲತ್‌ ನಡೆಸಲಾಗುತ್ತಿದೆ. ಹೀಗಾಗಿ ಜಿಲ್ಲೆಯ ನಿವೃತ್ತ ನೌಕರರು ತಮ್ಮ ಪಿಂಚಣಿ ಸಮಸ್ಯೆಗಳಿದ್ದಲ್ಲಿ ಅದಾಲತ್‌ನಲ್ಲಿ ಭಾಗವಹಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಿಂಚಣಿ ಅದಾಲತ್‌ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಪಿಂಚಣಿಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ಕೂಡಲೇ ಸೂಕ್ತ ದಾಖಲಾತಿ ಲಗತ್ತಿಸಿ ಸಣ್ಣ ಉಳಿತಾಯ ಮತ್ತು ಪಿಂಚಣಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.

ಹೀಗೆ ಪಿಂಚಣಿ ಅದಾಲತ್‌ ಮುನ್ನಾ ಸ್ವೀಕರಿಸಲ್ಪಟ್ಟ ಎಲ್ಲ ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಲು ಸಣ್ಣ ಉಳಿತಾಯ ಮತ್ತು ಪಿಂಚಣಿ ಇಲಾಖೆ ಸಹಾಯಕ ನಿರ್ದೇಶಕರು, ಜಿಲ್ಲಾ ಖಜಾನಾಧಿಕಾರಿ ಮತ್ತು ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಅಧಿಕಾರಿಗಳನ್ನೊಳಗೊಂಡ ತ್ರಿಸದಸ್ಯ ಸಮಿತಿ ರಚಿಸಬೇಕು.

ಸಮಿತಿ ಅರ್ಜಿ ಪರಾಮರ್ಶಿಸಿ ತನ್ನ ಸ್ಪಷ್ಟವಾದ ಅಭಿಪ್ರಾಯವನ್ನು ಅದಾಲತ್‌ ನಡೆಸುವ ಜಿಲ್ಲಾಧಿಕಾರಿಗಳಿಗೆ ಮಂಡಿಸಬೇಕು. ಹೀಗೆ ಮಂಡಿಸಿದ ಅದಾಲತ್‌ ದಿನದಂದು ಹೆಚ್ಚಿನ ಅರ್ಜಿಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ....

ಫೋಟೋ - http://v.duta.us/LnbBUwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/OrLQXQAA

📲 Get Kalburagi News on Whatsapp 💬