75 ಲಕ್ಷ ರೂ. ಮೌಲ್ಯದ ಪರಿಹಾರ ಸಂಗ್ರಹ

  |   Chitradurganews

ಚಳ್ಳಕೆರೆ: ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಕಷ್ಟಗಳ ನಡುವೆಯೂ ಉದಾರವಾಗಿ ದಾನ ನೀಡಿದ ಚಳ್ಳಕೆರೆ ತಾಲೂಕಿನ ಸಮಸ್ತ ಜನರಿಗೆ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ಟಿ. ರಘುಮೂರ್ತಿ ಹೇಳಿದರು.

ಇಲ್ಲಿನ ಶಾಸಕರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದ ಹಂತದಲ್ಲಿ ನಗರದ ಎಲ್ಲಾ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕವಾಗಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಪಕ್ಷ ಭೇದ ಮರೆತು ನೆರೆಪೀಡಿತ ಪ್ರದೇಶದ ಜನರಿಗೆ ಹಣ ಹಾಗೂ ವಸ್ತುಗಳನ್ನು ನೀಡುವ ಮೂಲಕ ಮಾನವೀಯತೆ ತೋರಿದ್ದಾರೆ. ನೆರೆಪೀಡಿತ ಜನರಿಗೆ ನೆರವಾಗುವ ನಿಟ್ಟಿನಲ್ಲಿ ನನ್ನೊಂದಿಗೆ ಕಳೆದ ಒಂದು ವಾರದಿಂದ ಹಗಲಿರುಳು ಸಹಕಾರ ನೀಡಿದ ಎಲ್ಲಾ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಅಧಿಕಾರಿ ವರ್ಗದ ಸಹಕಾರವನ್ನು ಮರೆಯುವಂತಿಲ್ಲ. ಅಂದಾಜು 45 ಲಕ್ಷ ರೂ. ನಗದು, 30 ಲಕ್ಷ ರೂ. ಮೌಲ್ಯದ ಆಹಾರ ಹಾಗೂ ಇತರೆ ವಸ್ತುಗಳು ಸೇರಿದಂತೆ ಒಟ್ಟು 75 ಲಕ್ಷ ರೂ. ಮೌಲ್ಯದ ವಸ್ತು ಹಾಗೂ ನಗದನ್ನು ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳಿಗೆ ತಲುಪಿಸಲಾಗುವುದು ಎಂದರು....

ಫೋಟೋ - http://v.duta.us/KQ54-QAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/xlrMNAAA

📲 Get Chitradurga News on Whatsapp 💬