ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿ ಗುರಿ

  |   Chitradurganews

ಹೊಳಲ್ಕೆರೆ: ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಒಂದು ಲಕ್ಷ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿದೆ. ಕಳೆದ ಬಾರಿ 65 ಸಾವಿರ ಸದಸ್ಯತ್ವ ನೋಂದಣಿ ಮಾಡಿದ್ದು, ಈ ಬಾರಿ ಮತ್ತಷ್ಟು ಹೆಚ್ಚಿಸಬೇಕು ಎಂಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ತಾಲೂಕು ಬಿಜೆಪಿ ವತಿಯಿಂದ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶ್ವದಲ್ಲಿ ಬಿಜೆಪಿ ಅತಿ ಹೆಚ್ಚು ಸದಸ್ಯತ್ವ ಹೊಂದಿದ ಪಕ್ಷವಾಗಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶದ ಅಭಿವೃದ್ಧಿಗೆ ಸಾಕಷ್ಟು ನೂತನ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ 10 ಸಾವಿರ ರೂ. ಧನಸಹಾಯ ನೀಡುತ್ತಿವೆ. ರಾಷ್ಟ್ರೀಯ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕಠಿಣ ನಿಲುವು ಹೊಂದಿದ್ದು, ಕಳೆದ ವಾರ ಮತ್ತೂಮ್ಮೆ ಸರ್ಜಿಕಲ್ ದಾಳಿ ನಡೆಸಿ ಪಾಕಿಸ್ತಾನದ ಉಗ್ರರ ಹತ್ಯೆ ಮಾಡಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ಹಾಗಾಗಿ ಪ್ರತಿಯೊಬ್ಬರು ಬಿಜೆಪಿ ಬೆಂಬಲಿಸಲು ತಪ್ಪದೇ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು....

ಫೋಟೋ - http://v.duta.us/cHJd_gAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/-Z9GGgAA

📲 Get Chitradurga News on Whatsapp 💬