ಸಂಚಾರ ನಿಯಮ ಪಾಲಿಸುವುದು ಕಡ್ಡಾಯ

  |   Mandyanews

ಮದ್ದೂರು: ವಿದ್ಯಾರ್ಥಿಗಳು ಸಂಚಾರ ನಿಯಮ ಪಾಲಿಸಿ ಅಪಘಾತಗಳನ್ನು ತಡೆಯಬೇಕೆಂದು ಬೆಸಗರಹಳ್ಳಿ ಪೊಲೀಸ್‌ ಠಾಣೆ ಆರಕ್ಷಕ ಉಪ ನಿರೀಕ್ಷಕ ಮಹದೇವಯ್ಯ ತಿಳಿಸಿದರು.

ತಾಲೂಕಿನ ಬೆಸಗರಹಳ್ಳಿ ಕರ್ನಾಟಕ ಪಬ್ಲಿಕ್‌ ಶಾಲೆಯ ಆವರಣದಲ್ಲಿ ಪೊಲೀಸ್‌ ಇಲಾಖೆ ಆಯೋಜಿಸಿದ್ದ ಸ್ಟೂಡೆಂಟ್ ಪೊಲೀಸ್‌ ಕೆಡಿಟ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳ ಕೈಗೆ ಯಾವುದೇ ವಾಹನ ಕೊಡಬಾರದು. ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು, ಜೋಶ್‌ನಲ್ಲಿ ಅತಿವೇಗದಲ್ಲಿ ಮಕ್ಕಳು ವಾಹನ ಚಲಾಯಿಸುವುದರಿಂದ ಅಪಘಾತಗಳಾಗುವ ಸಂಭವವಿದೆ. ವಾಹನ ಸವಾರರು ನಿಯಮಗಳನ್ನು ಪಾಲಿಸುವ ಜತೆಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದರು.

ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಹೆಚ್ಚು ಯುವಕರೇ ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕಕಾರಿ ವಿಚಾರ. ಧೂಮಪಾನ, ಮದ್ಯಪಾನ, ಜಾಲಿ ರೈಡಿಂಗ್‌, ಅತಿ ವೇಗವಾಗಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ. ವಿದ್ಯಾರ್ಥಿಗಳು ಸ್ಥಳೀಯರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ಪ್ರಾಂಶುಪಾಲ ಪ್ರಕಾಶ್‌, ಪೇದೆಗಳಾದ ನಾಗೇಶ, ಪ್ರದೀಪ್‌ಕುಮಾರ್‌, ಕೆಪಿಎಸ್‌ ಸದಸ್ಯ ಸುರೇಶ್‌, ಶಿಕ್ಷಕರಾದ ಶುಭಮಣಿ, ರಾಜಮ್ಮ, ರಾಜಶೇಖರ್‌ ಮತ್ತಿತರರು ಹಾಜರಿದ್ದರು.

ಫೋಟೋ - http://v.duta.us/S5lcQQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/K3rT7AAA

📲 Get Mandya News on Whatsapp 💬