ಜಿಲ್ಲೆಯಲ್ಲಿ ಭೂ ವಿವಾದ ಶೀಘ್ರ ಪರಿಹರಿಸಿಕೊಳ್ಳಿ

  |   Ramnagaranews

ರಾಮನಗರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಭೂಮಿಗೆ ಸಂಬಂಧಿಸಿದ ಬಾಕಿ ಇರುವ ವಿವಾದಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳ ಪಹಣಿಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳ ಕುರಿತು ಮಾಹಿತಿ ನೀಡುವಂತೆ ತಹಶೀಲ್ದಾರರಿಗೆ ಸೂಚನೆ ನೀಡಿದರು. ಮುಂದಿನ ಸಭೆಯೊಳಗೆ ಬಾಕಿ ಇರುವ ಎಲ್ಲಾ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ, ಜಿಲ್ಲೆಯ ಪ್ರಗತಿಯ ಬಗ್ಗೆ ಕ್ರಮವಹಿಸಿ ಎಂದರು.

ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ: ‘ಸಕಾಲ’ ಯೋಜನೆಯಡಿಯಲ್ಲಿ ಸಲ್ಲಿಕೆಯಾಗಿರುವ ಭೂ ವಿವಾದ ಸಂಬಂಧಿತ ಅರ್ಜಿಗಳ ವಿಲೇವಾರಿ ಕುರಿತಂತೆ ಬಾಕಿ ಇರುವ ಅರ್ಜಿಗಳ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಿ, ಅರ್ಜಿ ಭರ್ತಿಗೆ ತಾಂತ್ರಿಕ ಸಮಸ್ಯೆ ಇದ್ದಲ್ಲಿ, ಬದಲಿ ವ್ಯವಸ್ಥೆ ಮಾಡಿಕೊಂಡು ಶೀಘ್ರ ಅರ್ಜಿಗಳನ್ನು ವಿಲೇವಾರಿ ಮಾಡಿ ಎಂದು ಹೇಳಿದರು.

ಬೆಳ ಸಮೀಕ್ಷೆ: 2019ನೇ ಸಾಲಿನ ಮುಂಗಾರು ಹಂಗಾಮು ಬೆಳೆ ಸಮೀಕ್ಷೆ ಕಾರ್ಯ ಈಗಾಗಲೇ ಕನಕಪುರ ತಾಲೂಕಿನ 30 ಗ್ರಾಮಗಳಲ್ಲಿ ಪ್ರಗತಿಯಲ್ಲಿದೆ. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಪ್ರಾರಂಭವಾಗಿದೆ ಎಂದು ಜಿಲ್ಲಾಧಿಕಾರಿಗಳ ಸಭೆಯ ಗಮನ ಸೆಳೆದರು....

ಫೋಟೋ - http://v.duta.us/4FLmkgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/kxxdhQAA

📲 Get Ramnagara News on Whatsapp 💬