ಮತದಾನದ ಮಹತ್ವ ಸಾರಿದ ವಾಕಥಾನ್‌

  |   Mandyanews

ಮಂಡ್ಯ: ನನ್ನ ಓಟ ಮತದಾರರ ಪಟ್ಟಿ ಪರಿಶೀಲನೆ ಕಡೆಗೆ, ತುಂಬಿತು 18 ವರ್ಷ ಸಿಕ್ಕಿತು ಮತದಾನದ ಹರ್ಷ, ಜಾಗೃತ ಮತದಾರ ಪ್ರಜಾಪ್ರಭುತ್ವದ ನೇತಾರ..

ಹೀಗೆ ಮತದಾನದ ಮಹತ್ವ ಸಾರುವ ಹಲವಾರು ಜಾಗೃತಿ ಫ‌ಲಕಗಳನ್ನು ಹಿಡಿದು ನೂರಾರು ಸಂಖ್ಯೆಯಲ್ಲಿ ಆಗಮಿಸಿದ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಆಯೋಜಿಸಿದ್ದ ವಾಕಥಾನ್‌ನಲ್ಲಿ ಪಾಲ್ಗೊಂಡರು.

ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಪಂ ಸಿಇಒ ಕೆ.ಯಾಲಕ್ಕೀಗೌಡ, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್‌, ಉಪವಿಭಾಗಾಧಿಕಾರಿ ಶಿವಪ್ಪ, ನಗರಸಭೆ ಆಯುಕ್ತ ಲೋಕೇಶ್‌, ತಹಶೀಲ್ದಾರ್‌ ನಾಗೇಶ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ. ಮಂಚೇಗೌಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯಿಂದ ನಗರಸಭೆ ಕಾರ್ಯಾಲಯದವರೆಗೆ ವಾಕಥಾನ್‌ ನಡೆಸಿ ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

ನಗರಸಭೆ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಮಾತನಾಡಿ, ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತದೆ. ಅದೇ ಕಾರಣಕ್ಕೆ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದ್ದು, ಮತದಾರರು ಅದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು....

ಫೋಟೋ - http://v.duta.us/uWF2LgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/uHG9RQEA

📲 Get Mandya News on Whatsapp 💬