ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ ಪ್ರಕಟ

  |   Tumkurnews

ತುಮಕೂರು: ಜಿಲ್ಲಾದ್ಯಂತ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ, ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪೋಸ್ಟರ್‌ ಬಿಡುಗಡೆ ಮಾಡಿ ಮಾತನಾಡಿದರು.

ಅರ್ಹರು ಮತದಾನದಿಂದ ವಂಚಿತರಾಗದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಬೂತ್‌ ಮಟ್ಟದ ಅಧಿಕಾರಿಗಳು ಕಳುಹಿಸುವ ಪ್ರತಿ ವರದಿ ಕೂಲಂಕಷವಾಗಿ ಪರಿಶೀಲಿಸಿ ತದನಂತರ ಪಟ್ಟಿ ತಯಾ ರಿಸುವಂತೆ ಕಂದಾಯ ನಿರೀಕ್ಷಕರು ಮತ್ತು ಗ್ರಾಮಲೆಕ್ಕಿಗರಿಗೆ ಎಚ್ಚರಿಕೆ ನೀಡಿದರು.

ಬಿಎಲ್ಒಗಳಿಂದ ಪರಿಶೀಲನೆ: ಜಿಲ್ಲಾದ್ಯಂತ ಸೆ.1ರಿಂದ ಅ. 30ರವರೆಗೆ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಈ ವೇಳೆ ಜಿಲ್ಲೆಯ ಪ್ರತಿ ಮತದಾರರ ಮನೆಗೂ ಬಿಎಲ್ಒಗಳು ಹೋಗಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಒಂದು ವೇಳೆ ಬೇರೆ ಕಡೆಗೆ ಕುಟುಂಬ ಬದಲಾಗಿದ್ದರೆ ಅವರಿದ್ದ ಮನೆಗೆ ನೊಟೀಸ್‌ ಅಂಟಿಸಿ ಅದನ್ನು ವಿಡಿಯೋ ಮಾಡಿ ವರದಿ ಸಲ್ಲಿಸಬೇಕು. ಈ ಎಲ್ಲಾ ಪ್ರಕ್ರಿಯೆಗಳ ನಂತರವೇ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು....

ಫೋಟೋ - http://v.duta.us/NFcEqgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/-aSbxQAA

📲 Get Tumkur News on Whatsapp 💬