ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

  |   Ramnagaranews

ರಾಮನಗರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಆರಂಭವಾಗಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಖುದ್ದು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಸೆಪ್ಟೆಂಬರ್‌ 30ರವರೆಗೆ ಮನೆ ಮನೆ ಭೇಟಿ ಕಾರ್ಯಕ್ರಮ ಇದ್ದು, ಸಾರ್ವಜನಿಕರು ಸರಿಯಾದ ಮಾಹಿತಿ ನೀಡಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ ಮನವಿ ಮಾಡಿದರು.

ನಗರದ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕೀರ್ಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ 2020ರ ವೇಳೆ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಂಡಿದೆಯೇ, ಹೆಸರು ವಿಳಾಸ ಮತ್ತು ಇತರೆ ಮಾಹಿತಿ ಸರಿ ಇದೆಯೇ ಎಂದು ತಿಳಿದುಕೊಳ್ಳಬಹುದಾಗಿದೆ. ತಪ್ಪಾಗಿದ್ದರೆ ತಿದ್ದುಪಡಿಗೆ ಸೂಕ್ತ ಅರ್ಜಿ ಕೊಟ್ಟು ಬದಲಾಯಿಸಬಹುದಾಗಿದೆ. ಮತದಾರರ ಪಟ್ಟಿ ಪರಿಶೀಲಿಸಲು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ, ನಾಡ ಕಚೇರಿ, ಕಾಮನ್‌ ಸರ್ವಿಸ್‌ ಸೆಂಟರ್‌ಗಳು, ಗ್ರಾಮ ಪಂಚಾಯ್ತಿ ಕಚೇರಿ ಅಥವಾ ಮತಗಟ್ಟೆ ಅಧಿಕಾರಿ (ಬಿಎಲ್ಒ)ಗಳ ಬಳಿ ಪರಿಶೀಲಿಸಬಹುದು ಎಂದು ಹೇಳಿದರು.

ವಿಶೇಷ ಪರಿಷ್ಕರಣೆ ಉದ್ದೇಶ ಏನು?: ಮತಗಟ್ಟೆ ಅಧಿಕಾರಿಗಳು ತಮ್ಮ ಮೊಬೈಲ್ನಲ್ಲಿ ಚುನಾವಣಾ ಆಯೋಗ ಹೊರತಂದಿರುವ ಆ್ಯಪ್‌ನ್ನು ಬಳಸಿಕೊಂಡು ಮತದಾರರ ಮಾಹಿತಿಯ ಪರಿಶೀಲನೆ ಇತ್ಯಾದಿಯನ್ನು ಸರಿಪಡಿಸಿಕೊಳ್ಳ ಬಹುದು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಉದ್ದೇಶ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದು. ಮತದಾರರ ಪಟ್ಟಿಯಲ್ಲಿರುವ ಮತದಾರರ ಹೆಸರು, ವಯಸ್ಸು, ವಿಳಾಸ ಇತ್ಯಾದಿ ಲೋಪದೋಷಗಳನ್ನು ಸರಿಪಡಿಸುವುದು, ಮತದಾರರ ಪಟ್ಟಿಯಲ್ಲಿರುವ ಮತದಾರರ ಗುಣಮಟ್ಟ ಕಡಿಮೆ ಇರುವ ಭಾವಚಿತ್ರಗಳಿಗೆ ಹೊಸ ಭಾವ ಚಿತ್ರ ಕಲೆ ಹಾಕುವುದು, ಮರಣ, ದ್ವಿಗುಣ, ಸ್ಥಳಾಂತರಗೊಂಡ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಯಿಂದ ತೆಗೆದು ಹಾಕುವುದು ಎಂದು ಹೇಳಿದರು....

ಫೋಟೋ - http://v.duta.us/0br8DwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/IRIGYQAA

📲 Get Ramnagara News on Whatsapp 💬