ಹೊಳೆನರಸೀಪುರ: ಮತಪಟ್ಟಿ ಪರಿಷ್ಕರಣೆಗೆ ಚಾಲನೆ

  |   Hassannews

ಹೊಳೆನರಸೀಪುರ: ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಸೆ.1 ರಿಂದ ಅ.15 ರವರೆಗೆ ನಡೆಸಲಾಗುತ್ತಿದೆ ಎಂದು ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಹೇಳಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪ ಡಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಸೆ.1 ರಿಂದ ಅ.15 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಬೂತ್‌ ಲೆವಲ್ ಅಧಿಕಾರಿಗಳು ಮನೆ ಮನೆಗೆ ತೆರಳಿ 2020 ರ ಜ.1 ಕ್ಕೆ 18 ವರ್ಷ ತುಂಬುವ ಪ್ರತಿಯೊಬ್ಬರನ್ನೂ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ 18 ವರ್ಷ ತುಂಬುವವರು ತಮ್ಮ ಹೆಸರುಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದರು.

ಈ ಪರಿಷ್ಕರಣೆ ಕೇವಲ ಸೇರ್ಪಡೆಯೊಂದೇ ಅಲ್ಲ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವುದು, ತಿದ್ದುಪಡಿ, ಪರಿಶೀಲನೆ ಮತ್ತು ದೃಢೀಕರಣವನ್ನು ಸಹ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

ಜನವರಿಯಲ್ಲಿ ಗ್ರಾಪಂ ಚುನಾವಣೆ ನಡೆ ಯುವ ಸಾಧ್ಯತೆಯಿದ್ದು ರಾಜ್ಯ ಚುನಾವಣಾ ಅಧಿಕಾರಿ ಸಂಜೀವ್‌ಕುಮಾರ್‌ ಅವರ ಸೂಚನೆ ಯಂತೆ ಮತಪಟ್ಟಿ ಪರಿಷ್ಕರಣೆ ಕಾರ್ಯ ಆರಂಭಿಸಲಾಗಿದೆ. ಪ್ರತಿಯೊಬ್ಬರು ಸಹ ತಮ್ಮ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಕೊಳ್ಳಬೇಕು ಎಂದರು....

ಫೋಟೋ - http://v.duta.us/FCknPQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/0ymEEgAA

📲 Get Hassan News on Whatsapp 💬