ಅಗ್ರ ರ್‍ಯಾಂಕ್‌ ಪಡೆಯಲು ಜಿಪಂ ಕಸರತ್ತು

  |   Bangalore-Citynews

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ -2019ರ’ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದೆ. ಈಗಾಗಲೇ ಸರ್ಕಾರಿ ಶಾಲೆ, ಕಾಲೇಜು, ಅಂಗನವಾಡಿ ಕೇಂದ್ರ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ, ಪರಿಶಿಷ್ಟ ಜಾತಿ, ಪಂಗಡದ ಜನವಸತಿ ಪ್ರದೇಶಗಳಲ್ಲಿನ ಸಮುದಾಯ ಶೌಚಾಲಯಗಳ ಬಳಕೆ ಮತ್ತು ನಿರ್ವಹಣೆ, ಮಾರುಕಟ್ಟೆ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿದೆ.

ಜನರು ನೀಡುವ ಅಂಕಗಳ ಆಧಾರದಲ್ಲಿ ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಶ್ರೇಣಿ ಪಟ್ಟಿ ಸಿದ್ಧಪಡಿಸುತ್ತದೆ. ಹೆಚ್ಚು ಓಟ್‌ ಪಡೆದು, ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದ ಜಿಲ್ಲಾ ಪಂಚಾಯಿತಿಗೆ ಅ.2ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಸ್ತಿ ನೀಡುತ್ತಾರೆ. ಆ ಹಿನ್ನೆಲೆಯಲ್ಲಿ ಜಿ.ಪಂ ಸ್ವಚ್ಛ ಭಾರತ ಮಿಷನ್‌ ಅಧಿಕಾರಿಗಳು ನಗರ ಜಿಲ್ಲಾ ವ್ಯಾಪ್ತಿಯ 96 ಗ್ರಾ.ಪಂ.ಗಳಿಗೆ ಭೇಟಿ ನೀಡಿ, ಓಟ್‌ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.

ಕೇಂದ್ರದ ಸಮೀಕ್ಷಾ ತಂಡ, ತಾಲೂಕು ಅಥವಾ ಗ್ರಾಮಗಳಿಗೆ ಭೇಟಿ ನೀಡಿದಾಗ ಸಮೀಕ್ಷಕರು ನಡೆಸುವ ಗುಂಪು ಸಭೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಸಮೀಕ್ಷಕರು ಕೇಳುವ ಪ್ರಶ್ನೆಗಳಿಗೆ ಜನತೆ ಸಮರ್ಪಕ ಮಾಹಿತಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಯಾ ತಾಲೂಕು ಮತ್ತು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ನಗರ ಜಿ.ಪಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....

ಫೋಟೋ - http://v.duta.us/uA4_SQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/W2O5wAAA

📲 Get Bangalore City News on Whatsapp 💬