ಉಪ ಚುನಾವಣೆಗೆ ಜಿಲ್ಲಾಡಳಿತ ತಾಲೀಮು

  |   Chikkaballapuranews

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ನ್ಯಾಯ ಸಮ್ಮತ ಹಾಗೂ ಮುಕ್ತ ಚುನಾವಣೆ ನಡೆಸಲು ತಾಲೀಮು ಆರಂಭಿಸಿರುವ ಜಿಲ್ಲಾಡಳಿತ ರಜೆ ದಿನವಾದ ಭಾನುವಾರ ಸಹ ಜಿಲ್ಲಾಧಿಕಾರಿ ಆರ್‌.ಲತಾ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು ಚುನಾವಣೆ ಸಿದ್ಧತೆಗಳ ಕುರಿತು ಮಾರ್ಗದರ್ಶನ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆ ವರೆಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ, ಚುನಾವಣೆಗೆ ಬೇಕಾದ ತಯಾರಿ, ಚುನಾವಣಾ ನೀತಿ ಸಂಹಿತೆ ಅನುಷ್ಠಾನದ ಕುರಿತು ಚರ್ಚೆ ನಡೆಸಿ ಅಧಿಕಾರಿಗಳು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ 2019ರ ನೀತಿ ಸಂಹಿತೆಯು ಸೆ.21ರಿಂದ ಜಾರಿಯಾಗಿದ್ದು, ಕಟ್ಟುನಿಟ್ಟಾಗಿ ಅಧಿಕಾರಿಗಳು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಬೇಕು. ನೀತಿ ಸಂಹಿತೆ ಉಲ್ಲಂ ಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇಡೀ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಜಾರಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುನಾವಣಾ ಸಿದ್ಧತೆಯನ್ನು ಸಮರ್ಪಕವಾಗಿ ತಯಾರಿ ಮಾಡಿಕೊಳ್ಳಬೇಕು. ಈಗಾಗಲೇ ಎಲ್ಲಾ ಕಡೆ ಪೋಸ್ಟರ್‌, ಬ್ಯಾನರ್‌, ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗಿದೆ ಎಂದರು....

ಫೋಟೋ - http://v.duta.us/6FbDYAAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/I54X7wAA

📲 Get Chikkaballapura News on Whatsapp 💬