ಕೇಂದ್ರದ ಸಾಧನೆಗಳನ್ನು ಜನರಿಗೆ ತಿಳಿಸಿ

  |   Bangalore-Ruralnews

ದೇವನಹಳ್ಳಿ: ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕೆಂದು ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಕಾರ್ಯಕರ್ತರಿಗೆ ಸೂಚಿಸಿದರು. ರಾಷ್ಟ್ರೀಯ ಏಕತಾ ಅಭಿಯಾನದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ನಡ್ಡಾ,ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕದ‌ಲ್ಲಿ ಬಿಜೆಪಿ ಆಡಳಿತ ಬಂದಿರುವುದರಿಂದ ಸುವರ್ಣಯುಗ ಬರಲಿದೆ.ಪ್ರತಿ ಕಾರ್ಯಕರ್ತರು ಪಕ್ಷ ಸಂಘಟನೆಯ ಮೂಲಕ ಪಕ್ಷವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉತ್ತಮ ಜನಪರ ಕಾರ್ಯಗಳನ್ನು ಮಾಡುತ್ತಿದ್ದು,ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದರು.

ಅದ್ಧೂರಿ ಸ್ವಾಗತ: ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕವಾದ ನಂತರ, ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಜೆ.ಪಿ ನಡ್ಡಾ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಉಪ ಮುಖ್ಯಮಂತ್ರಿ ಗೋವಿಂದ ಕಾರ ಜೋಳ, ಕಂದಾಯ ಸಚಿವ ಆರ್‌.ಅಶೋಕ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌.ಆರ್‌ ವಿಶ್ವನಾಥ್‌ ಸೇರಿದಂತೆ ಇತರ ನಾಯಕರು ನಡ್ಡಾ ಅವರನ್ನು ಬರ ಮಾಡಿಕೊಂಡರು....

ಫೋಟೋ - http://v.duta.us/mMUVFwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/NFKXNAAA

📲 Get Bangalore Rural News on Whatsapp 💬