ಗೋಕಾಕ್‌ನಲ್ಲಿ ನಾನೇ ಸ್ಪರ್ಧಿಸುತ್ತೇನೆ: ರಮೇಶ

  |   Karnatakanews

ಬೆಳಗಾವಿ: “ರಾಜೀನಾಮೆ ಕೊಟ್ಟ ದಿನವೇ ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧನಾಗಿದ್ದೇನೆ. ಗೋಕಾಕ ಕ್ಷೇತ್ರದಲ್ಲಿ ನಾನೇ ಸ್ಪರ್ಧೆ ಮಾಡುತ್ತೇನೆ. ಯಾವ ಪಕ್ಷದಿಂದ ಎಂದು ತೀರ್ಮಾನ ಮಾಡಿಲ್ಲ’ ಎಂದು ಅನರ್ಹ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾನೂನು ಅಡಚಣೆ, ತಾಂತ್ರಿಕ ಸಮಸ್ಯೆ ಬಗ್ಗೆ ವಕೀಲರೊಂದಿಗೆ ಚರ್ಚೆ ಮಾಡುತ್ತೇವೆ.

ಅನರ್ಹರು ಚುನಾವಣೆಗೆ ಸ್ಪರ್ಧಿಸಲು ಬರುವುದಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸ್ಪೀಕರ್‌ ಅವರ ಆದೇಶ ಓದಿ ಹೇಳಿದ್ದಾರೆ. ಸ್ಪೀಕರ್‌ ರಮೇಶಕುಮಾರ್‌ ಆದೇಶ ಸುಪ್ರೀಂ ಕೋರ್ಟ್‌ನಲ್ಲಿ ಒಂದು ತಾಸು ನಿಲ್ಲುವುದಿಲ್ಲ. ರಮೇಶಕುಮಾರ್‌ ಕಾನೂನು ಬಾಹಿರವಾಗಿ ಆದೇಶ ಮಾಡಿದ್ದಾರೆ. ನೂರಕ್ಕೆ ನೂರರಷ್ಟು ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ಜಯ ಸಿಗುತ್ತದೆ’ ಎಂದರು.

ಸಹೋದರ ಲಖನ್‌ ಜಾರಕಿಹೊಳಿ ಶಾಸಕನಾದರೆ ಅತಿ ಹೆಚ್ಚು ಸಂತೋಷ ಪಡುವ ವ್ಯಕ್ತಿ ನಾನೇ. ಲಖನ್‌ಗೆ ಒಳ್ಳೆಯದಾಗಲಿ, ಸತೀಶ ಜಾರಕಿಹೊಳಿ ಮಾತು ಕೇಳಿ ಲಖನ್‌ ಹಾಳಾಗುವುದು ಬೇಡ. ಗೋಕಾಕ ಜನರು ಸತೀಶಗೆ ಬುದ್ಧಿ ಕಲಿಸುತ್ತಾರೆ. ಸತೀಶ ವಿರೋಧ ಮಾಡಿದಷ್ಟು ನನಗೆ ಒಳ್ಳೆಯದಾಗುತ್ತದೆ. ಅತೀ ಶೀಘ್ರವೇ ನನ್ನ ಮುಂದಿನ ನಡೆ ಬಗ್ಗೆ ತಿಳಿಸುತ್ತೇನೆ. ಮತದಾರರು ಡೈವರ್ಟ್‌ ಆಗುವುದು ಬೇಡ ಎಂದರು....

ಫೋಟೋ - http://v.duta.us/Jz97MQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/-Z3nJwAA

📲 Get Karnatakanews on Whatsapp 💬