ಚಾಲಕನ ಮನೆಗೆ ನುಗ್ಗಿ ಪ್ರಾಣ ಬೆದರಿಕೆ

  |   Bangalore-Citynews

ಬೆಂಗಳೂರು: ತಪಾಸಣೆ ನೆಪದಲ್ಲಿ ಗೂಡ್ಸ್‌ ವಾಹನ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ ಹಲಸೂರು ಗೇಟ್‌ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ ವೀಡಿಯೋ ವೈರಲ್‌ ಆಗಿತ್ತು. ಘಟನೆ ಬೆನ್ನಿಗೇ ಶನಿವಾರ ರಾತ್ರಿ ಜೆ.ಪಿ.ನಗರದ ಜರಗನಹಳ್ಳಿಯಲ್ಲಿರುವ ಚಾಲಕ ಸುನೀಲ್‌ ಕುಮಾರ್‌ ಮನೆಗೆ ನುಗ್ಗಿದ ನಾಲ್ಕೈದು ಮಂದಿ ಅಪರಿಚಿತರು, ಚಾಲಕನ ತಾಯಿಗೆ ಪ್ರಾಣ ಬೆದರಿಕೆ ಹಾಕಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಈ ಸಂಬಂಧ ಚಾಲಕ ಸುನೀಲ್‌ ಕುಮಾರ್‌ ತಾಯಿ ರತ್ನಮ್ಮ, ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ದೂರು ಸ್ವೀಕರಿಸಿರುವ ಪೊಲೀಸರು ಗಂಭೀರ ಸ್ವರೂಪವಲ್ಲದ ಪ್ರಕರಣ(ಎನ್‌ಸಿಆರ್‌) ದಾಖಲಿಸಿಕೊಂಡಿದ್ದಾರೆ. ಗೂಡ್ಸ್‌ ವಾಹನ ಚಾಲಕರಾಗಿರುವ ಸುನೀಲ್‌ ಕುಮಾರ್‌, ಜರಗನಹಳ್ಳಿಯಲ್ಲಿ ತಾಯಿ ರತ್ನಮ್ಮ ಜತೆ ವಾಸವಾಗಿದ್ದಾರೆ. ಶುಕ್ರವಾರ ಹಲಸೂರು ಗೇಟ್‌ ಸಂಚಾರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಹಾಸ್ವಾಮಿ, ಚಲಿಸುವ ವಾಹನವನ್ನೇರಿ ಚಾಲಕ ಸುನೀಲ್‌ ಕುಮಾರ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಕೂಡ ನಡೆಸಿದ್ದರು. ಈ ವಿಚಾರವನ್ನು ತಾಯಿ ರತ್ನಮ್ಮಗೆ ಕರೆ ಮಾಡಿ ಹೇಳಿದ್ದ ಸುನೀಲ್‌ ಕುಮಾರ್‌ ಇದುವರೆಗೂ ಮನೆಗೆ ಬಂದಿಲ್ಲ....

ಫೋಟೋ - http://v.duta.us/uxhg2QAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/iZmTPQAA

📲 Get Bangalore City News on Whatsapp 💬