ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

  |   Chamarajanagarnews

ಚಾಮರಾಜನಗರ: ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ದಸರಾ ಕ್ರೀಡೆಯಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಉತ್ತಮ ಕ್ರೀಡಾ ಪ್ರದರ್ಶನ ಮಾಡಬೇಕು. ಕ್ರೀಡೆಗೆ ಪ್ರಾಮುಖ್ಯತೆ ನೀಡಿ ಒಳ್ಳೆಯ ಕ್ರೀಡಾಪಟುವಾಗಿ ಹೊರಹೊಮ್ಮಬೇಕು ಎಂದು ಹಾರೈಸಿದರು.

ನಿರಂತರ ಪರಿಶ್ರಮದಿಂದ ಗೆಲುವು: ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಜಿ. ಬಸವಣ್ಣ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ, ಕ್ರೀಡಾಪಟುಗಳು ಸೋಲಿನಿಂದ ಎದೆಗುಂದದೆ ನಿರಂತರ ಪರಿಶ್ರಮಪಟ್ಟರೆ ಗೆಲುವು ಸಾಧ್ಯವಾಗುತ್ತದೆ. ಕ್ರೀಡೆಯಲ್ಲಿ ಮೊದಲಿಗೆ ಸ್ಪರ್ಧಿಸುವ ಮನೋಭಾವನೆಯನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು ಎಂದು ಎಂದರು.

ಮುಂದಿನ ಹಂತಕ್ಕೆ ಅವಕಾಶ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಚೆಲುವಯ್ಯ ಮಾತನಾಡಿ, ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಮುಂದಿನ ಹಂತದಲ್ಲಿ ಸ್ಪರ್ಧಿಸುವ ಅವಕಾಶ ಲಭಿಸಲಿದೆ ಎಂದು ಮಾಹಿತಿ ನೀಡಿದರು. ಡಿ.ವೈ.ಎಸ್‌.ಪಿ ಮೋಹನ್‌ ಮತ್ತಿತರರು ಇದ್ದರು. 100 ಮೀ, 200ಮೀ, 400 ಮೀ, 800, ಮೀ, 1500 ಮೀ. ಓಟ, ಕಬ್ಬಡಿ, ಖೋ ಖೋ, ವಾಲಿಬಾಲ್‌ ಇನ್ನಿತರ ಆಟೋಟಗಳಲ್ಲಿ ಕ್ರೀಡಾಪಟುಗಳು ಭಾಗವಹಿಸಿದರು....

ಫೋಟೋ - http://v.duta.us/2UTkkQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/CIhC5wAA

📲 Get Chamarajanagar News on Whatsapp 💬