ನೀತಿ ಸಂಹಿತೆ ಪಾಲಿಸಲು ಡಿಸಿ ಸೂಚನೆ

  |   Belgaumnews

ಬೆಳಗಾವಿ: ಉಪ ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೆ ಬಂದಿರುವ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದರು.

ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಯಾವುದೇ ರೀತಿಯ ಹೊಸ ಕಾಮಗಾರಿಗಳನ್ನು ಆರಂಭಿಸಬಾರದು. ಹೊಸ ಟೆಂಡರ್‌ ಪ್ರಕ್ರಿಯೆ ನಡೆಸಬಾರದು. ಒಂದು ವೇಳೆ ಈಗಾಗಲೇ ಕಾಮಗಾರಿ ಆರಂಭಿಸಿದ್ದರೆ ಕೆಲಸ ಮುಂದುವರಿಸಲು ಯಾವುದೇ ತೊಂದರೆಯಿಲ್ಲ ಎಂದರು.

ಇಲಾಖಾವಾರು ಆರ್ಥಿಕ ಮತ್ತು ಭೌತಿಕ ಗುರಿ ಸಾಧನೆಗೆ ಸಾಕಷ್ಟು ಸಮಯ ಇರುವುದರಿಂದ ಮಾದರಿ ನೀತಿ ಸಂಹಿತೆ ವೇಳೆ ಹೊಸದಾಗಿ ಯಾವುದೇ ಕಾಮಗಾರಿ ಆರಂಭಿಸಬಾರದು. ಅನಗತ್ಯವಾಗಿ ಸಚಿವರು ಅಥವಾ ಜನಪ್ರತಿನಿಧಿಗಳ ಭೇಟಿ ಸೇರಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ರೀತಿಯಲ್ಲಿ ಯಾವುದೇ ರೀತಿಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದರು.

ರಜೆ ನೀಡದಂತೆ ಸೂಚನೆ: ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಯಾವುದೇ ಅಧಿಕಾರಿಗಳು ಅಥವಾ ಕೆಳಹಂತದ ಸಿಬ್ಬಂದಿಗೆ ರಜೆ ನೀಡಬಾರದು. ಅನುಮತಿ ಪಡೆಯದೇ ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಟ್ಟು ಹೊರಗಡೆ ತೆರಳಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು....

ಫೋಟೋ - http://v.duta.us/mLVDXgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/5umqPAAA

📲 Get Belgaum News on Whatsapp 💬