ಪ್ರವಾಸಿ ವ್ಯಾಖ್ಯಾನ ಕೇಂದ್ರ ಆರಂಭಕ್ಕೆ ಸಿದ್ಧತೆ

  |   Bijapur-Karnatakanews

„ಜಿ.ಎಸ್‌. ಕಮತರ

ವಿಜಯಪುರ: ಪಾರಂಪರಿಕ ನಗರಿ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಸರ್ಕಾರ ಘೋಷಿಸಿರುವ ಪ್ರವಾಸಿ ವ್ಯಾಖ್ಯಾನ ಆರಂಭಕ್ಕೆ ಸಿದ್ಧತೆ ನಡೆದಿದೆ. ಗುಮ್ಮಟನಗರಿ ವಿಜಯಪುರ ನಗರದಲ್ಲಿರುವ ಐತಿಹಾಸಿಕ ಸ್ಮಾರಕ ಆನಂದ ಮಹಲ್‌ನಲ್ಲಿ ಪ್ರವಾಸಿ ವ್ಯಾಖ್ಯಾನ ಕೇಂದ್ರ ಆರಂಭಕ್ಕೆ ಈಗಾಗಲೇ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಂದುಕೊಂಡಂತೆ ಎಲ್ಲವೂ ನಡೆದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಹೊಸ ಮೈಲುಗಲ್ಲು ನಿರ್ಮಾಣವಾಗಲಿದೆ.

ಎಚ್‌.ಡಿ. ಕುಮಾರಸ್ವಾಮಿ ಸರ್ಕಾರ 2019ರ ಬಜೆಟ್‌ನಲ್ಲಿ ಘೋಷಿಸಿದ ಪ್ರವಾಸಿ ವ್ಯಾಖ್ಯಾನ ಕೇಂದ್ರ ಆರಂಭಕ್ಕೆ ಚಾಲನೆ ದೊರೆತಿದೆ. ಕರ್ನಾಟಕ ರಾಜ್ಯದ ಪ್ರಾಚ್ಯವಸ್ತು, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ತಜ್ಞರ ತಂಡ ಉದ್ದೇಶಿತ ಪ್ರವಾಸಿ ವ್ಯಾಖ್ಯಾನ ಕೇಂದ್ರ ಸ್ಥಳದಲ್ಲಿ ಸಮೀಕ್ಷೆ ನಡೆಸಿದೆ. ಉದ್ದೇಶಿತ ಯೋಜನೆ ಆರಂಭಿಸಲು ಜಿಲ್ಲಾಡಳಿತ ಆನಂದ ಮಹಲ್‌ ಸ್ಥಳ ಆಯ್ಕೆ ಮಾಡಿದ್ದು, ಮೈಸೂರಿನಲ್ಲಿರುವ ಕರ್ನಾಟಕ ಪ್ರಾಚ್ಯವಸ್ತು-ಸಂಗ್ರಹಾಲಯ ಪರಂಪರೆ ಇಲಾಖೆ ಆಯುಕ್ತ ಟಿ.ವೆಂಕಟೇಶ, ಪ್ರಭಾರಿ ಉಪ ನಿರ್ದೇಶಕ ವಾಸುದೇವ, ಸುವರ್ಣ ಸೇರಿದಂತೆ ಇತರೆ ತಜ್ಞರನ್ನು ಒಳಗೊಂಡ ತಂಡ ಆಗಸ್ಟ್‌ 27ರಂದು ವಿಜಯಪುರ ನಗರಕ್ಕೆ ಆಗಮಿಸಿ ಸ್ಥಳ ಸಮೀಕ್ಷೆ...

ಫೋಟೋ - http://v.duta.us/nwkf6gAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/mPKoUwAA

📲 Get Bijapur Karnataka News on Whatsapp 💬