ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಅನಿವಾರ್ಯ

  |   Haverinews

ಹಾವೇರಿ: ಅಕ್ಷರ ಜ್ಞಾನದ ಜತೆಗೆ ಇಂದಿನ ಕಂಪ್ಯೂಟರ್‌ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್‌ ಜ್ಞಾನ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸಾಕ್ಷರತಾ ಮಿಷನ್‌ ಗಮನಹರಿಸಬೇಕು ಎಂದು ಜಿಪಂ ಅಧ್ಯಕ್ಷ ಎಸ್‌.ಕೆ.ಕರಿಯಣ್ಣನವರ ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಲೋಕಶಿಕ್ಷಣ ನಿರ್ದೇಶನಾಲಯ, ರಾಜ್ಯ ಸಾಕ್ಷರತಾ ಮಿಷನ್‌ ಪ್ರಾಧಿಕಾರ, ಜಿಪಂ, ಜಿಲ್ಲಾ ಲೋಕ ಶಿಕ್ಷಣ ಸಮಿತಿ, ಜಿಲ್ಲಾ ಸಾಕ್ಷರ ಸಮಿತಿ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಸಾಕ್ಷರತಾ ಕಾರ್ಯಕ್ರಮದ ಅನುಷ್ಠಾನದ ಮುಖ್ಯ ತರಬೇತಿದಾರರಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಷರದಿಂದ ದೂರ ಉಳಿದವರಿಗೆ ಸರ್ಕಾರವು ಸಾಕ್ಷರರನ್ನಾಗಿ ಮಾಡಲು ಅನೇಕ ಸೌಲಭ್ಯ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಈ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕಾಗಿದೆ. ಶಿಕ್ಷಣ ವಂಚಿತ ಗ್ರಾಮೀಣ ಜನತೆ, ಅಕ್ಷರ ಕಲಿತರೆ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಕೆಲಸ ಮಹತ್ವದ್ದಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಮಾತನಾಡಿ, ನಿಮ್ಮ ಸುತ್ತಮುತ್ತಲಿನ ಅನಕ್ಷರಸ್ಥರಿಗೆ ಅಕ್ಷರ ಕಲಿಯುವ ಹಾಗೂ ಓದುವ ಹವ್ಯಾಸ ಬೆಳೆಸಿ. ಶಿಕ್ಷಣದ ಮಹತ್ವ ಕುರಿತಂತೆ ಅವರಿಗೆ ಮನವರಿಕೆ ಮಾಡಿಕೊಡಿ. ಈ ಕೆಲಸ ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ ಎಂದು ಹೇಳಿದರು....

ಫೋಟೋ - http://v.duta.us/hld0gwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/Bs_JLgAA

📲 Get Haveri News on Whatsapp 💬