ರಾಜ್ಯ ವಿಧಾನಮಂಡಲ ಅಧಿವೇಶನ ಮೂರು ದಿನಕ್ಕೆ ಸೀಮಿತ

  |   Karnatakanews

ಬೆಂಗಳೂರು: ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನ ಮೂರು ದಿನಗಳಿಗೆ ಸೀಮಿತಗೊಳಿಸಲಾಗಿದ್ದು, ಅಕ್ಟೋಬರ್‌ 10 ರಿಂದ 12 ವರೆಗೆ ನಿಗದಿಪಡಿಸಲಾಗಿದೆ.

ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಮೂರು ದಿನ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಈ ಹಿಂದೆ ಅ.14 ರಿಂದ 10 ದಿನ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಉಪ ಚುನಾವಣೆ ಘೋಷಣೆಯಾಗಿ ನೀರಿ ಸಂಹಿತೆ ಜಾರಿಯಲ್ಲಿರುವುದರಿಂದ ಅ.10 ರಿಂದ 12 ರವರೆಗೆ ಮೂರು ದಿನಕ್ಕೆ ಸೀಮಿತಗೊಳಿಸಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಬಜೆಟ್‌ ಅನುಮೋದನೆಗೆ ಸೀಮಿತವಾಗಿ ಅಧಿವೇಶನ ನಡೆಯಲಿದೆ. ಪೂರಕ ಬಜೆಟ್‌ ಮಂಡಿಸಲಾಗುವುದು. ಪೂರ್ಣ ಪ್ರಮಾಣದ ಬಜೆಟ್‌ಗೆ ಅನುಮೋದನೆ ಸಿಗದಿದ್ದರೆ ಲೇಖಾನುದಾನ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.

20 ಕೋಟಿ ರೂ. ಬಿಡುಗಡೆ

ಹೈದರಾಬಾದ್‌ ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ಘೋಷಣೆ ಮಾಡಲಾಗಿದ್ದು ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು. 50 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದೀಗ ಮೊದಲ ಹಂತದಲ್ಲಿ 20 ಕೋಟಿ ರೂ. ಬಿಡುಗಡೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು....

ಫೋಟೋ - http://v.duta.us/BAYOdgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/ETQEHQEA

📲 Get Karnatakanews on Whatsapp 💬