ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಡೀಸಿ

  |   Bangalore-Ruralnews

ದೇವನಹಳ್ಳಿ: ಜಿಲ್ಲೆಯ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ಜಿಲ್ಲಾದ್ಯಂತ ಮಾದರಿ ನೀತಿ ಸಂಹಿತೆ ಚುನಾವಣಾ ಪ್ರಕ್ರಿಯೆ ಮುಗಿಯುವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಜಿಲಾಧಿಕಾರಿ ಎನ್‌. ರವೀಂದ್ರ ತಿಳಿಸಿದರು. ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿ ಇರುವ ಜಿಲ್ಲಾ ಸಂಕೀರ್ಣದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧಿಸಿದಂತೆ ರಾಜಕೀಯ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

ಅ.21ಕ್ಕೆ ಮತದಾನ: ಸೆ.23ಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಸೆ.30 ನಾಮ ಪತ್ರ ಸ್ವೀಕರಿಸಲು ಕೊನೆಯ ದಿನವಾಗಿದೆ. ಅ.1 ರಂದು ನಾಮ ಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಅ.3 ಕೊನೆಯ ದಿನವಾಗಿದ್ದು, ಅ.21 ರಂದು ಮತದಾನ ನಡೆಯಲಿದೆ. ಅ.24ಕ್ಕೆ ಮತ ಎಣಿಕೆ ನಡೆಯಲಿದೆ. ಬೆಂ.ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿದೇಶಕ ಹನುಮಂತ ರಾಯಪ್ಪ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಯಾಗಿ ಹೊಸಕೋಟೆ ತಾಲೂಕಿನ ತಹಶೀಲ್ದಾರ್‌ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

286 ಮತಗಟ್ಟೆ ಸ್ಥಾಪನೆ: ಚುನಾವಣಾಧಿಕಾರಿ ಅವರ ಕೇಂದ್ರ ಕಚೇರಿ ಕಾರ್ಯ ಸ್ಥಳ, ನಾಮ ಪತ್ರ ಇತ್ಯಾದಿ ಪ್ರಕ್ರಿಯೆಗಳು ಹೊಸಕೋಟೆ ಮಿನಿ ವಿಧಾನ ಸೌಧ ಕಟ್ಟಡ , ತಾಲೂಕು ಕಚೇರಿ ಆಗಿರುತ್ತದೆ. ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1,07,766 ಪುರುಷರು, 1,04,954 ಮಹಿಳೆಯರು, 26 ಇತರರು ಸೇರಿ ಒಟ್ಟು 2,12,748 ,ಮತದಾರರು ಇದ್ದಾರೆ. ಉಪ ಚುನಾವಣೆಯಲ್ಲಿ 286 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಗ್ರಾಮಾಂತರ ವ್ಯಾಪ್ತಿಯಲ್ಲಿ 237, ನಗರ ವ್ಯಾಪ್ತಿಯಲ್ಲಿ 49 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಮತದಾನಕ್ಕೆ ಬಿ ಇಎಲ್‌ ಸಂಸ್ಥೆಯು ಎಮ್‌ 03 ಮಾದರಿಯ ಇವಿಎಮ್‌ಗಳನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು....

ಫೋಟೋ - http://v.duta.us/bLRdoQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/j00PAAAA

📲 Get Bangalore Rural News on Whatsapp 💬