ಶಾಲೆಗೆ ಭೂಮಿ ನೀಡುವ ಕುರಿತು ಸಿಎಂ ಜತೆ ಚರ್ಚೆ

  |   Bangalore-Citynews

ಬೆಂಗಳೂರು: ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲೆ ನಿರ್ಮಿಸಲು ಬಿಲ್ಲವ ಅಸೋಸಿಯೇಶನ್‌ಗೆ ಎರಡು ಎಕರೆ ಭೂಮಿ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ಬಿಲ್ಲವ ಅಸೋಸಿಯೇಶನ್‌ ಭಾನುವಾರ ಬನ್ನೇರುಘಟ್ಟ ರಸ್ತೆಯಲ್ಲಿರುವ ದೇವಕಿ ಆನಂದ ಸುವರ್ಣ ಸಭಾಂಗಣದಲ್ಲಿ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಮಕ್ಕಳ ಶಿಕ್ಷಣಕ್ಕಾಗಿ ಶಾಲೆ, ಹಾಸ್ಟೆಲ್‌ ನಿರ್ಮಾಣಕ್ಕೆ ಭೂಮಿ ಹಾಗೂ ನಾರಾಯಣ ಗುರುಗಳ ಹೆಸರಿನಲ್ಲಿ ಈಡಿಗ, ಬಿಲ್ಲವ ಸಮಾಜದ 26 ಉಪಜಾತಿಗಳನ್ನು ಒಳಗೊಂಡಂತೆ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವ ಬಗ್ಗೆ ನಿಯೋಗದೊಂದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೇಡಿಕೆ ಇಡಲಾಗುವುದು ಎಂದು ತಿಳಿಸಿದರು. ಬಿಲ್ಲವ ಸಮುದಾಯವನ್ನು 2ಎ ಪ್ರವರ್ಗದಿಂದ ಪ್ರವರ್ಗ 1ಕ್ಕೆ ಸೇರಿಸಲು ಗಮನ ಸೆಳೆಯಲಾಗುವುದು. ಇದರಿಂದ ಆರ್ಥಿಕ ಮಿತಿ ಇರುವುದಿಲ್ಲ. ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೆಚ್ಚಿನ ಸೌಲಭ್ಯ ಸಿಗಲಿದೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌, ಬಿಲ್ಲವ ಅಸೋಸಿಯೇಶನ್‌ ಅಧ್ಯಕ್ಷ ಎಂ.ವೇದಕುಮಾರ್‌ ಮಾತನಾಡಿದರು. ಇದೇ ವೇಳೆ ಬಿಲ್ಲವ ಭವನ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಬಿ.ಕೇಶವ ಪೂಜಾರಿ, ರಾಜೇಶ್‌ ಕುಮಾರ್‌, ಬಿ.ಎಂ. ಉದಯ ಕುಮಾರ್‌, ಹೋಟೆಲ್‌ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಟಿ.ಸದಾಶಿವ ಕರ್ಕೇರ, ಎಂ.ರಾಜು, ಗಣೇಶ್‌ ಪೂಜಾರಿ, ಗೋವಿಂದ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 30 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 70 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು....

ಫೋಟೋ - http://v.duta.us/O5Lb3wAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/GkRHiAAA

📲 Get Bangalore City News on Whatsapp 💬