ಸಭೆ-ಸಮಾರಂಭಕ್ಕೆ ಅನುಮತಿ ಕಡ್ಡಾಯ

  |   Belgaumnews

ಬೆಳಗಾವಿ: ಜಿಲ್ಲೆಯ ಮೂರು ಮತಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಸೋಮವಾರದಿಂದ ನಾಮಪತ್ರ ಸ್ವೀಕಾರ ಆರಂಭವಾಗಲಿದೆ. ಮಾದರಿ ನೀತಿ ಸಂಹಿತೆ ಜಿಲ್ಲಾ ವ್ಯಾಪ್ತಿಯಲ್ಲಿ ಜಾರಿಯಲ್ಲಿ ಇರುವುದರಿಂದ ಯಾವುದೇ ಸಭೆ, ಸಮಾರಂಭ ಅಥವಾ ಮೆರವಣಿಗೆಗೆ ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಸೂಚನೆ ನೀಡಿದರು.

ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಸಾಮಗ್ರಿಗಳನ್ನುಅಳವಡಿಸುವಂತಿಲ್ಲ. ಖಾಸಗಿ ಜಾಗದಲ್ಲಿ ಪ್ರಚಾರ ಸಾಮಗ್ರಿ ಅಳವಡಿಸಲು ಮಾಲೀಕರು ಹಾಗೂ ಸ್ಥಳೀಯ ಸಂಸ್ಥೆಯ ಅನುಮತಿ ಪಡೆದಿರಬೇಕು ಎಂದು ಹೇಳಿದರು.

ಚುನಾವಣಾ ಪ್ರಚಾರ ನಡೆಸಬೇಕಾದರೆ ನಿಯಮಾವಳಿ ಪ್ರಕಾರ ಪೂರ್ವಾನುಮತಿ ಪಡೆದುಕೊಳ್ಳಬೇಕು. ಪಕ್ಷದ ಪದಾಧಿಕಾರಿಗಳಿಗೆ ವಾಹನ ಬಳಕೆ, ಧ್ವನಿ ವರ್ಧಕಗಳ ಬಳಕೆಗೆ ಅನುಮತಿ ಪಡೆಯಬೇಕು. ಅದೇ ರೀತಿ ಖಾಸಗಿ ಸ್ಥಳದ ಬಳಕೆಗೆ ಅವುಗಳ ಮಾಲೀಕರಮತ್ತು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಅಗತ್ಯ ಎಂದರು.

ಚುನಾವಣಾ ವೆಚ್ಚ ವೀಕ್ಷಕರು: ಜಿಲ್ಲೆಯಲ್ಲಿ ನಡೆಯಲಿರುವ ಮೂರು ಮತಕ್ಷೇತ್ರಗಳ ಉಪಚುನಾವಣೆಯ ಖರ್ಚು-ವೆಚ್ಚದ ಮೇಲೆ ನಿಗಾ ವಹಿಸಲು ಚುನಾವಣಾ ವೀಕ್ಷಕರು ಶೀಘ್ರ...

ಫೋಟೋ - http://v.duta.us/FjpEvQAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/gybYYwAA

📲 Get Belgaum News on Whatsapp 💬