ಸರಕು ಸಾಗಾಟ ವಾಹನಗಳಲ್ಲಿ ವಿದ್ಯಾರ್ಥಿಗಳ ಸಂಚಾರ ನಿಷೇಧ

  |   Dakshina-Kannadanews

ವಿಶೇಷ ವರದಿ-ಸುಳ್ಯ : ಶಾಲೆ, ಕ್ರೀಡಾಕೂಟ, ಸಭೆ, ಸಮಾರಂಭ ಮೊದಲಾದ ಶಾಲಾ ಸಂಬಂಧಿತ ಚಟುವಟಿಕೆಗಳಿಗೆ ತೆರಳುವ ವಿದ್ಯಾರ್ಥಿಗಳನ್ನು ಸರಕು ಸಾಗಾಣಿಕ ವಾಹನಗಳಲ್ಲಿ ಕರೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮೋಟಾರು ವಾಹನ ಕಾಯ್ದೆ ನಿಯಮ ಉಲ್ಲಂಘಿಸಿ ಸುರಕ್ಷಿತವಲ್ಲದ ರೀತಿಯಲ್ಲಿ ಸಂಚರಿಸುವ ಕಾರಣ ಅಪಘಾತ ಪ್ರಕರಣ ಹೆಚ್ಚಾಗಿ ಮಕ್ಕಳ ಜೀವಕ್ಕೆ ಕುತ್ತು ಉಂಟಾಗುವ ಹಿನ್ನೆಲೆಯಲ್ಲಿ ಸರಕು ಸಾಗಣೆ ವಾಹನಗಳನ್ನು ಮಕ್ಕಳ ಸಂಚಾರಕ್ಕೆ ಬಳಸದಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

ಸುತ್ತೋಲೆ ರವಾನೆ

ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ಈ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಕಳುಹಿಸಿದೆ. ಪ್ರತಿಭಾ ಕಾರಂಜಿ, ದಸರಾ ಕ್ರೀಡಾಕೂಟ, ಶಿಕ್ಷಣ ಇಲಾಖೆ ಕ್ರೀಡಾಕೂಟ, ಪ್ರವಾಸಗಳಿಗೆ ಬೇರೆ ಬೇರೆ ಕಡೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಕಾರಣ ಮಕ್ಕಳ ಸುರಕ್ಷತೆಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಈ ಆದೇಶ ಮಹತ್ವ ಪಡೆದಿದೆ.

ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಸರಕು ಸಾಗಾಣೆ ವಾಹನಗಳಲ್ಲಿ ಸುರಕ್ಷಿತವಲ್ಲದ ರೀತಿಯಲ್ಲಿ ಕಾರ್ಯಾಚರಣೆ ಮಾಡುವುದನ್ನು ತಡೆಗಟ್ಟಿ, ಇಲಾಖೆಯ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸುವಂತೆ ಎಲ್ಲ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮೂಲಕ ಮಾಹಿತಿ ರವಾನಿಸಲಾಗಿದೆ. ಆದೇಶ ಉಲ್ಲಂಘಿಸಿ, ಕ್ರಮ ವಹಿಸದೆ ಇರುವ ಶಾಲೆಗಳ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣಾ ಪ್ರಾಧಿಕಾರದಲ್ಲಿ ದೂರು ದಾಖಲಿಸಿ ಕ್ರಮ ಜರಗಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ....

ಫೋಟೋ - http://v.duta.us/mui0GwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/sHvr8wAA

📲 Get Dakshina Kannada News on Whatsapp 💬