ಸ್ವಸ್ಥ ಸಮಾಜ ನಿರ್ಮಿಸಲು ಮಾರ್ಗದರ್ಶನ ಮಾಡಿ

  |   Davanagerenews

ದಾವಣಗೆರೆ: ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಹಿರಿಯ ನಾಗರಿಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪ್ರಭು ಎನ್‌. ಬಡಿಗೇರ್‌ ಆಶಿಸಿದ್ದಾರೆ.

ವಿಶ್ವ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್‌, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತಿರುವ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಬಾಪೂಜಿ ಸ್ಕೂಲ್‌ ಮೈದಾನದಲ್ಲಿ ಏರ್ಪಡಿಸಿದ್ದ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರಿಕರು ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಯುವ ಜನಾಂಗಕ್ಕೆ ಉತ್ತಮ ಸಂದೇಶ, ಮಾರ್ಗದರ್ಶನ ನೀಡಬೇಕು ಎಂದರು.

ವಿಶ್ವ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಏರ್ಪಡಿಸಿರುವ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅನೇಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಸಂತೋಷದ ವಿಚಾರ. ತಾವು ನೋಡಿದಂತೆ ಅನೇಕ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಯುವಕರೇ ಭಾಗವಹಿಸುವುದಕ್ಕೆ ಹಿಂದೇಟು ಹಾಕುತ್ತಾರೆ ಎಂದು ತಿಳಿಸಿದರು.

ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ನೆಮ್ಮದಿ ಸಿಗುತ್ತದೆ. ಯಾವುದೂ ರೀತಿಯಲ್ಲಿ ಹಾನಿ ಆಗುವುದೇ ಇಲ್ಲ. ಬದಲಿಗೆ ಆರೋಗ್ಯ ವೃದ್ಧಿಸುತ್ತದೆ. ಮನಸ್ಸು ಚಿಂತೆಯಿಂದ ದೂರವಾಗುತ್ತದೆ. ವಯಸ್ಸಾಗುವುದು ದೇಹಕ್ಕೆ ಮಾತ್ರ, ಮನಸ್ಸಿಗಲ್ಲ. ಇಂತಹ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಮೂಲಕ ಆನಂದ ದೊರೆಯುತ್ತದೆ. ಪ್ರತಿ ಬಾರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಕೋರಿದರು. ನಿವೃತ್ತ ಪ್ರಾಚಾರ್ಯ ಪ್ರೊ| ಬಿ.ಜಿ. ಚಂದ್ರಶೇಖರಪ್ಪ ಮಾತನಾಡಿ, 60ಕ್ಕೆ ಅರಳು ಮರಳು ಎಂಬ ಮಾತಿದೆ. ನಿಜವಾಗಿಯೂ 60ಕ್ಕೆ ಅರಳು ಮರಳು ಅಲ್ಲ. 60 ಎಂದರೆ ಮರಳಿ ಅರಳುವುದು. ಇಂದಿನ ನಗರೀಕರಣ, ಜಾಗತೀಕರಣ, ಅನೇಕ ಕರಣಗಳ ನಡುವೆ ಮಾನವೀಯ ಅಂತಃಕರಣವೇ ಮಾಯವಾಗುತ್ತಿದೆ ಎಂದು ವಿಷಾದಿಸಿದರು....

ಫೋಟೋ - http://v.duta.us/Z5nbWwAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/bgMkwQAA

📲 Get Davanagere News on Whatsapp 💬