ಸಂವಹನ ಕೌಶಲ್ಯ ಅಗತ್ಯ

  |   Chikkaballapuranews

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಎಷ್ಟೇ ಉನ್ನತ ಶಿಕ್ಷಣ ಪಡೆದರೂ ಸಂವಹನ ಕೌಶಲ್ಯ ಬೆಳೆಸಿಕೊಳ್ಳಬೇಕು. ಅನೇಕ ವಿದ್ಯಾರ್ಥಿಗಳಿಗೆ ಇಂದಿಗೂ ಉದ್ಯೋಗ ನೀಡುವ ಕಂಪನಿಗಳು ಏರ್ಪಡಿಸುವ ಸಂದರ್ಶನ ಎದುರಿಸುವ ಕಲೆ ಗೊತ್ತಿಲ್ಲದೇ ಕೈಗೆ ಬರುವ ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಐಟಿಬಿಟಿ ಇಲಾಖೆ ನಿವೃತ್ತ ಕಾರ್ಯದರ್ಶಿ ವಿವೇಕ್‌ ಕುಲಕರ್ಣಿ ತಿಳಿಸಿದರು.

ನಗರದ ಹೊರ ವಲಯದಲ್ಲಿರುವ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ಐದು ವರ್ಷಗಳ ಎಂಜಿನಿಯರಿಂಗ್‌ ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದ ಬಳಿಕ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಓದಿನಷ್ಟೇ ಕೌಶಲಕ್ಕೂ ಆದ್ಯತೆ ನೀಡಬೇಕಿದೆ. ಎಂಜಿನಿಯರಿಂಗ್‌ ವಿಭಾಗಗಳ ಪೈಕಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ಗೆ ಇರುವ ವಿಫ‌ುಲವಾದ ಅವಕಾಶಗಳು ಮತ್ತೂಂದಕ್ಕಿಲ್ಲ ಎಂದರು.

ಗುಣಮಟ್ಟದ ಶಿಕ್ಷಣ ಪಡೆಯಿರಿ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಓದು, ಬರಹದ ಅಭ್ಯಾಸ ಸಾಕಷ್ಟು ಕ್ಷೀಣಿಸುತ್ತಿದೆ. ಸತತ ಅಧ್ಯಯನದಿಂದ ಜ್ಞಾರ್ನಾಜನೆ ಹೆಚ್ಚುತ್ತದೆ. ಆದರೆ ಇಂದಿನ ಬಹಳಷ್ಟು ವಿದ್ಯಾರ್ಥಿಗಳು ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ ಎಂದರು. ಉತ್ತಮ ಭವಿಷ್ಯ ರೂಪುಗೊಳ್ಳಬೇಕಾದರೆ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಓದು ಮುಗಿದ ನಂತರ ಬದುಕು ರೂಪಿಸಿಕೊಳ್ಳುವುದು ಬಹಳ ಮುಖ್ಯ. ಆದ್ದರಿಂದ ವಿದ್ಯಾರ್ಥಿ ಜೀವನವನ್ನು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕೆಂದರು....

ಫೋಟೋ - http://v.duta.us/v00elgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/1JBLpQAA

📲 Get Chikkaballapura News on Whatsapp 💬