ಋಣಮುಕ್ತ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಿ

  |   Chikkaballapuranews

ಚಿಕ್ಕಬಳ್ಳಾಪುರ: ಋಣಮುಕ್ತ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಹಾಗೂ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಮಾಸಿಕ ಕನಿಷ್ಠ 18 ಸಾವಿರ ರೂ. ವೇತನ ನಿಗದಿಪಡಿಸಬೇಕು, ಉದ್ಯೋಗಕ್ಕೆ ತಕ್ಕಂತೆ ಕೂಲಿ ನೀಡಬೇಕೆಂದು ಆಗ್ರಹಿಸಿ ಗುರುವಾರ ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು.

ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ಬಳಿಕ ನಗರದ ಅಂಬೇಡ್ಕರ್‌ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಘೋಷಣೆ ಕೂಗಿದ ಪ್ರತಿಭಟನಕಾರರು, ಕೃಷಿ ಕೂಲಿ ಕಾರ್ಮಿಕರ ಬೇಡಿಕೆಗಳ ಈಡೇರಿಕೆ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಒಂದು ಕಡೆ ನೆರೆ ಹಾಗೂ ಮತ್ತೂಂದಡೆ ಬರ ಆವರಿಸಿ ರೈತಾಲಿ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದರೂ ಸರ್ಕಾರಗಳು ಮಾತ್ರ ಪರಿಹಾರ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಲ್ಲಿ ಸಂಪೂರ್ಣ ವಿಫ‌ವಾಗಿವೆಯೆಂದು ಪ್ರತಿಭಟನಕಾರರು ಸರ್ಕಾರಗಳ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿ ಅಂಬೇಡ್ಕರ್‌ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಘೋಷಣೆಗಳನ್ನು ಕೂಗಿದರು.

ದೇಶದಲ್ಲಿ ಆರ್ಥಿಕತೆ ಕುಸಿತ: ಪ್ರಾಂತ ಕೃಷಿ ಕೂಲಿಗಾರರ ಸಂಘದ ರಾಜ್ಯ ಸಮಿತಿ ಸದಸ್ಯ ಎಂ.ಪಿ ಮುನಿವೆಂಕಟಪ್ಪ ಮಾತನಾಡಿ, ಎನ್‌ಡಿಎ ಸರ್ಕಾರ ಅನುಸರಿಸುತ್ತಿರುವ ನವ ಉದಾರೀಕರಣದ ಜನ ವಿರೋಧಿ ಆರ್ಥಿಕ ನೀತಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ಇಂದು ಪಾತಾಳಕ್ಕೆ ಕುಸಿದು ಉದ್ಯೋಗ ಸೃಷ್ಟಿ ಕುಸಿದಿದೆ. ಬ್ಯಾಂಕುಗಳು ಆರ್ಥಿಕ ನಷ್ಟಕ್ಕೆ ಗುರಿಯಾಗಿ ವಿಲೀನಗೊಳಿಸುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ವಿದೇಶಿ ಹಾಗೂ ಸ್ವದೇಶಿ ಕಾರ್ಪೊರೇಟರ್‌ ಕಂಪನಿಗಳ ಬಂಡವಾಳ ಹಿತ ಕಾಪಾಡಲು ಆಸಕ್ತಿ ತೋರುವ ಪ್ರಧಾನಿ ಮೋದಿ ರೈತರನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು....

ಫೋಟೋ - http://v.duta.us/sL2Y7gAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/zzxlFQAA

📲 Get Chikkaballapura News on Whatsapp 💬