ಕನಕಪುರದಲ್ಲಿ ಬಂದ್‌: ಪ್ರತಿಭಟನೆ ನಿರಂತರ

  |   Ramnagaranews

ಕನಕಪುರ: ಕಳೆದ 3 ದಿನಗಳಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ಬಂಧನ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾಗಿತ್ತು. ಈ ಸಂಬಂಧ ಮೂವ ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಡಿ.ಕೆ. ಶಿವಕುಮಾರ್‌ ಬೆಂಬಲಿಗರು ಎಲ್ಲರೂ ಸೇರಿ ನಗರದಲ್ಲಿ ಬೃಹತ್‌ ಪ್ರತಿಭಟನೆ ಮಾಡುವುದಾಗಿ ಪೊಲೀಸ್‌ ಇಲಾಖೆಗೆ ಮನವಿ ಮಾಡಿದರು.

ಇದರಿಂದ ನೌಕರರಿಗೆ, ಕಾಲೇಜುಗಳಿಗೆ ಬೆಂಗಳೂರಿಗೆ ಹೋಗಬೇಕಿದ್ದ ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡಿದರು. ಗುರುವಾರ ಬೆಳಗ್ಗೆ 5 ಗಂಟೆಯಿಂದಲೇ ಬಸ್‌ ಗಳಿಗಾಗಿ ಕಾದು ಕುಳಿತಿದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದ್ವಿಚಕ್ರ ವಾಹನಗಳಲ್ಲಿ ಬೆಂಗಳೂರಿಗೆ ಓಡಾಡುತ್ತಿದ್ದದ್ದು ಕಂಡು ಬಂತು. ಬುಧವಾರ ವರ್ತಕರು ಸ್ವಯಂ ಪ್ರೇರಿತವಾಗಿ ವ್ಯಾಪಾರ ವ್ಯವಹಾರಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಗುರುವಾರ ಎಂದಿನಂತೆ ಮಳಿಗೆಗಳನ್ನು ತೆರೆಯುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಬೈಕ್‌ ರ್ಯಾಲಿಯಲ್ಲಿ ಬಂದು ಪೊಲೀಸರೆದುರೇ ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಿ, ಪ್ರತಿಭಟನೆಗೆ ಬೆಂಬಲ ಕೋರಿದರು.

ಬೆಳಗ್ಗೆ 10 ಗಂಟೆಯಿಂದ ನಗರದ ಚನಬಸಪ್ಪ ವೃತ್ತದಲ್ಲಿ ಜಮಾವಣೆ ಗೊಂಡ ನೂರಾರು ಕಾಂಗ್ರೆಸ್‌- ಜೆಡಿಎಸ್‌ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಸೇರಿ ನಗರದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣಮೂರ್ತಿ ಅವರ ನೇತ್ರತ್ವದಲ್ಲಿ ಪ್ರತಿಭಟಸಿದರು....

ಫೋಟೋ - http://v.duta.us/mpK18gAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/6Q1kvwAA

📲 Get Ramnagara News on Whatsapp 💬