ಕಾಪು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಶಾಸಕರೊಂದಿಗೆ ಕೈ ಜೋಡಣೆ: ಡಿಸಿ

  |   Udupinews

ಕಾಪು: ಕ್ಷೇತ್ರದ ಸಮಗ್ರ ಅಭಿವೃದ್ಧಿ ಚಿಂತನೆಯೊಂದಿಗೆ ಯೋಜನಾ ಪಟ್ಟಿ ಸಹಿತವಾದ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದು, ಅದಕ್ಕೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸಲಿದೆ. ಪೂರ್ವ ಭಾವಿಯಾಗಿ ಶಾಸಕರು ಸೂಚಿಸಿದ ಪ್ರದೇಶಗಳಿಗೆ ತೆರಳಿ ಪರಿಶೀಲನ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಹೇಳಿದರು.

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧೆಡೆಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ ಪೀಡಿತ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರ ಅಪೇಕ್ಷೆಯ ಮೇರೆಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಸಮಸ್ಯೆಗಳನ್ನು ಪರಿಶೀಲನೆ ನಡೆಸಿ, ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ತಾಲೂಕಿನ ವಿವಿಧ ಪ್ರದೇಶಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಯಾವುದೆಲ್ಲಾ ಕೆಲಸಗಳನ್ನು ತುರ್ತಾಗಿ ನಡೆಸಬೇಕು, ಯಾವುದಕ್ಕೆ ಪ್ರಥಮ ಆದ್ಯತೆ ಕೊಡಬೇಕು ಎನ್ನುವುದರ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸರಕಾರಕ್ಕೆ ವರದಿ ನೀಡಲಾಗುವುದು ಎಂದರು.

ತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ

ಕಾಪು ಪುರಸಭೆಯ ತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ಅವರು ತ್ಯಾಜ್ಯ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡುವ ಬಗ್ಗೆ ಭರವಸೆ ನೀಡಿದರು. ಎಲ್ಲೂರಿನಲ್ಲಿ ಮೀಸಲಿಟ್ಟ ಪ್ರದೇಶದ ಬಗ್ಗೆಯೂ ಮಾಹಿತಿ ಪಡೆದ ಅವರು ಅಲ್ಲಿಗೆ ಭೇಟಿ ನೀಡಿ, ಅಲ್ಲಿನ ಸ್ಥಳೀಯಾಡಳಿತ ಸಂಸ್ಥೆ ಮತ್ತು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸುವುದಾಗಿ ಅವರು ಭರವಸೆ ನೀಡಿದರು....

ಫೋಟೋ - http://v.duta.us/lkGIDgAA

ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ - http://v.duta.us/IukIxgAA

📲 Get Udupi News on Whatsapp 💬